ಗುಂಡ್ಲುಪೇಟೆ: ‘ನಾಯಕತ್ವದ ಗುಣ ಬೆಳೆಸಿಕೊಳ್ಳುವ ಜೊತೆಗೆ ಕೌಶಲಾಭಿವೃದ್ಧಿಗೆ ಒತ್ತು ಕೊಡಬೇಕು’ ಎಂದು ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಬಿ.ಚಂದ್ರಶೇಖರ ಸಲಹೆ ನೀಡಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ನಡೆದ ಸಾಂಸ್ಕೃತಿಕ, ಕ್ರೀಡೆ, ಎನ್ಎಸ್ಎಸ್, ರೋವರ್ಸ್ ಮತ್ತು ರೇಂಜರ್ಸ್, ರೆಡ್ಕ್ರಾಸ್ ಹಾಗೂ ವಿವಿಧ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

‘ವಿದ್ಯಾರ್ಥಿಗಳು ಸಮಾಜದ ಸವಾಲುಗಳನ್ನು ಎದುರಿಸುವ ಆತ್ಮವಿಶ್ವಾಸ ಬೆಳೆಸಿಕೊಳ್ಳುವ ಮೂಲಕ ಉದ್ಯೋಗಶೀಲರಾಗಲು ಮುಂದಾಗಬೇಕು’ ಎಂದು ತಿಳಿಸಿದರು.

‘ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಸಂಕೋಚ ಸ್ವಭಾವ ಬಿಡಬೇಕು. ಯುವ ಶಕ್ತಿ ಹತ್ತು ಹಲವು ಸವಾಲು ಎದುರಿಸುತ್ತಿದ್ದು, ಇದನ್ನೇ ಭವಿಷ್ಯದ ಮೆಟ್ಟಿಲುಗಳನ್ನಾಗಿ ಬಳಸಿಕೊಳ್ಳಬೇಕು’ ಎಂದು ಹೇಳಿದರು.

ಅಂತರರಾಷ್ಟ್ರೀಯ ಮಟ್ಟದ ಕೊಕ್ಕೊ ಕ್ರೀಡಾಪಟು ಬಿ.ಚೈತ್ರಾ ಮಾತನಾಡಿ, ‘ವಿದ್ಯಾರ್ಥಿಗಳು ಸಾಧನೆ ಮಾಡಲು ಕ್ರೀಡಾ ಕ್ಷೇತ್ರದಲ್ಲಿ ವಿಪುಲ ಅವಕಾಶಗಳಿವೆ. ದೈಹಿಕ ಶಿಕ್ಷಣ ನಿರ್ದೇಶಕರ ಸಲಹೆ, ಮಾರ್ಗದರ್ಶನ ಪಡೆದು ಅವಕಾಶಗಳ ಸದುಪಯೋಗ ಪಡೆದುಕೊಳ್ಳಬೇಕು. ಕ್ರೀಡೆ ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಪೂರಕವಾಗಿದೆ. ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮೂಲಕ ಕ್ರೀಡೆಯಲ್ಲಿ ಪಾಲ್ಗೊಳ್ಳಬೇಕು’ ಎಂದು ಸಲಹೆ ನೀಡಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಜಿ.ಬಿ.ಪವಿತ್ರ ಮಾತನಾಡಿದರು. ಸಿಡಿಸಿ ಕಾರ್ಯಾಧ್ಯಕ್ಷ ಬಿ.ಕುಮಾರಸ್ವಾಮಿ, ಸದಸ್ಯೆ ಭಾಗ್ಯಮ್ಮ, ಸಾಂಸ್ಕೃತಿಕ ಸಮಿತಿ ಸಂಚಾಲಕಿ ಎಸ್.ಎಸ್.ಲಕ್ಷ್ಮಿ, ಐಕ್ಯೂಎಸಿ ಸಂಚಾಲಕರಾದ ವಿಜಯಕುಮಾರ್, ಕ್ರೀಡಾ ಸಂಚಾಲಕ ಕೆ.ಚಂದ್ರಶೇಖರ, ಕಚೇರಿ ಅಧೀಕ್ಷಕ ಎನ್.ಪುಟ್ಟಬುದ್ಧಿ, ತುಳಸೀರಾಮ್, ಎಸ್.ಸಂಯುಕ್ತಸಿಂಗ್, ಶಾಲಿನಿ, ಶಿವಸ್ವಾಮಿ, ಕವಿತಾ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.