ಬುಧವಾರ, ಮಾರ್ಚ್ 29, 2023
33 °C

ಕೊಂಗಳ್ಳಿ ಬೆಟ್ಟ: ದರ್ಶನಕ್ಕೆ ಅವಕಾಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಗಡಿಭಾಗ ತಮಿಳುನಾಡಿನ ತಾಳವಾಡಿಯಲ್ಲಿರುವ ಕೊಂಗಳ್ಳಿ ಮಲ್ಲಿಕಾರ್ಜುನ ಸ್ವಾಮಿ ದೇವಾಲಯದಲ್ಲಿ ಕಾರ್ತಿಕ ಮಾಸ ಮತ್ತು ಧನುರ್ಮಾಸದ ಅವಧಿಯಲ್ಲಿ ದರ್ಶನಕ್ಕೆ ಮಾತ್ರ ಅವಕಾಶ ನೀಡಿ ಈರೋಡು ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಕೋವಿಡ್‌ ಮುನ್ನೆಚ್ಚರಿಕೆ ಕ್ರಮವಾಗಿ ಉತ್ಸವಗಳು ಹಾಗೂ ವಿಶೇಷ ಪೂಜೆಗಳನ್ನು ನಿರ್ಬಂಧಿಸಲಾಗಿದೆ. 

ವಾರದ ಎಲ್ಲ ದಿನಗಳಲ್ಲೂ ಬೆಳಿಗ್ಗೆ 8 ರಿಂದ ಮಧ್ಯಾಹ್ನ 3ರವರೆಗೆ ದರ್ಶನ ಪಡೆಯಬಹುದು. ಕೋವಿಡ್‌–19 ತಡೆ ನಿಯಮಗಳನ್ನು ಅನುಸರಿಬೇಕು ಎಂದು ಜಿಲ್ಲಾಡಳಿತ ಸೂಚಿಸಿದೆ. 

ಮಾಸ್ಕ್‌, ಥರ್ಮಲ್‌ ಸ್ಕ್ರೀನಿಂಗ್‌, ಸ್ಯಾನಿಟರ್‌ ಬಳಕೆ, ಸುರಕ್ಷಿತ ಅಂತರ ಕಾಯ್ದುಕೊಳ್ಳುವುದನ್ನು ಕಡ್ಡಾಯವಾಗಿ  ಪಾಲಿಸಬೇಕು. ದೇವಸ್ಥಾನದ ಆವರಣದಲ್ಲಿ ಅಡುಗೆ ತಯಾರಿಸಲು ಮತ್ತು ಕೊಂಗಳ್ಳಿ ಅಥವಾ ಇತರ ಯಾವುದೇ ಗ್ರಾಮದಲ್ಲಿ ವಾಸ್ತವ್ಯ ಹೂಡಲು ಮತ್ತು ಅಡುಗೆ ಮಾಡುವುದನ್ನು ನಿಷೇಧಿಸಲಾಗಿದೆ. 10 ವರ್ಷಕ್ಕೆ ಕೆಳಗಿನವರು ಮತ್ತು 65 ವರ್ಷಕಿಂತ ಹೆಚ್ಚು ವಯಸ್ಸಿನವರು, ವಿವಿಧ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ದೇವಾಲಯದ ಪ್ರವೇಶ ನಿರ್ಬಂಧಿಸಲಾಗಿದೆ. ದೇವಸ್ಥಾನದ ಆವರಣದಲ್ಲಿ ಭಕ್ತರು ಸ್ವತಃ ಪೂಜೆ ಮಾಡಲು ಅವಕಾಶ ಇರುವುದಿಲ್ಲ ಎಂದು ಕೊಂಗಳ್ಳಿ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. 

ದೇವಾಲಯವು ತಮಿಳುನಾಡಿನಲ್ಲಿದ್ದರೂ, ಕನ್ನಡಿಗರು, ಅದರಲ್ಲೂ ಜಿಲ್ಲೆಯ ಜನರೇ ಹೆಚ್ಚಾಗಿ ಅಲ್ಲಿಗೆ ತೆರಳಿ, ಸೇವೆ ವಿಶೇಷ ಪೂಜೆ ಸಲ್ಲಿಸುತ್ತಾರೆ. ಕೋವಿಡ್‌ ಕಾರಣಕ್ಕೆ ಇದೇ 18ರವರೆಗೆ ಭಕ್ತರ ಪ್ರವೇಶ ನಿರ್ಬಂಧ ವಿಧಿಸಿ ಈರೋಡ್‌ ಜಿಲ್ಲಾಡಳಿತ ಆದೇಶ ಹೊರಡಿಸಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು