ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಾರ್ಚ್‌ 11ರಂದು ದಿವಂಗತ ಧ್ರುವನಾರಾಯಣ ಅವರ ಮೊದಲ ವರ್ಷದ ಪುಣ್ಯ ಸ್ಮರಣೆ

Published 6 ಮಾರ್ಚ್ 2024, 6:29 IST
Last Updated 6 ಮಾರ್ಚ್ 2024, 6:29 IST
ಅಕ್ಷರ ಗಾತ್ರ

ಚಾಮರಾಜನಗರ: ಮಾಜಿ ಸಂಸದ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ದಿ.ಆರ್.ಧ್ರುವನಾರಾಯಣ ಅವರ ಮೊದಲ ವರ್ಷದ ಪುಣ್ಯಸ್ಮರಣೆ ಮಾರ್ಚ್‌ 11ಕ್ಕೆ ನಡೆಯಲಿದೆ.

ಜಿಲ್ಲೆಯಾದ್ಯಂತ ಪುಣ್ಯ ಸ್ಮರಣೆ ಆಚರಿಸಲು ಜಿಲ್ಲಾ ಕಾಂಗ್ರೆಸ್‌ ಮುಖಂಡರು ಹಾಗೂ ಅಭಿಮಾನಿಗಳು ಸಿದ್ಧತೆ ನಡೆಸಿದ್ದು, ಮಂಗಳವಾರ ಪಕ್ಷದ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಸಿದರು.  

ಸಭೆಯಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್‌ ಸಮಿತಿ, ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ, ‘ನಮ್ಮನ್ನಗಲಿದ ನಾಯಕನ ಪ್ರಥಮ ವರ್ಷದ ಪುಣ್ಯ ಸ್ಮರಣೆಯನ್ನು ‍‍ಪ್ರತಿ ಹಳ್ಳಿಯಲ್ಲೂ ಆಚರಿಸಬೇಕು. ಹಳ್ಳಿ ಹಳ್ಳಿಗಳಲ್ಲಿ, ನಗರ, ಪಟ್ಟಣ ಪ್ರದೇಶಗಳ ವಾರ್ಡ್‌ಗಳಲ್ಲೂ ಅವರ ಭಾವಚಿತ್ರವಿಟ್ಟು ಪೂಜೆ, ಪುಷ್ಪಾರ್ಚನೆ ಮಾಡಿ ಅವರ ಸೇವೆಯನ್ನು ಸ್ಮರಿಸಿಕೊಳ್ಳುವ ಕೆಲಸ ಮಾಡಬೇಕು. ಜಿಲ್ಲಾ ಕೇಂದ್ರದಲ್ಲಿ ಪಕ್ಷದ ವಿವಿಧ ಘಟಕಗಳು ದಿನಪೂರ್ತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು’ ಎಂದರು. 

‘ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಎಂಟೂ ವಿದಾನಸಭಾ ಕ್ಷೇತ್ರಗಳಲ್ಲಿಯೂ ಧ್ರುವನಾರಾಯಣ ಚಿಪರಿಚಿತರು. ಪಕ್ಷದ ಸಂಘಟನೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ ಕಾಂಗ್ರೆಸ್ ಸೇನಾನಿ, ಹಗಲು ರಾತ್ರಿ ಎನ್ನದೆ ಪಕ್ಷಕ್ಕಾಗಿ ದುಡಿದು ತ್ಯಾಗ ಮಾಡಿದ ಅವರು ದೈಹಿಕವಾಗಿ ನಮ್ಮನ್ನಗಲಿರಬಹುದು; ಆದರೆ, ಅವರು ಮಾಡಿರುವ ಕೆಲಸ ಕಾರ್ಯಗಳು ನಮ್ಮ ಮುಂದೆ ಇದ್ದು, ಸದಾ ಅವರನ್ನು ನೆನಪಿಸುತ್ತವೆ. ಪ್ರಥಮ ವರ್ಷದ ಪುಣ್ಯರಾಧನೆಯನ್ನು ಅಚ್ಚುಕಟ್ಟಾಗಿ ಜಿಲ್ಲೆಯಲ್ಲಿ ನಿರ್ವಹಣೆ ಮಾಡಲು ಜಿಲ್ಲೆಯ ಮೂವರು ಶಾಸಕರು ಹಾಗೂ ಮಾಜಿ ಶಾಸಕರು, ಮಾಜಿ ಸಂಸದರು ಸೇರಿದಂತೆ ಎಲ್ಲರೂ ಕೈ ಜೋಡಿಸಬೇಕು’ ಎಂದರು. 

ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ. ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಚಿಕ್ಕಮಹದೇವ್, ಅಭಿಮಾನಿ ಬಳಗದ ಅಧ್ಯಕ್ಷ ಕಾಗಲವಾಡಿ ಚಂದ್ರು, ಕೆರೆಹಳ್ಳಿ ನವೀನ್, ಸದಾಶಿವಮೂರ್ತಿ, ನಗರಸಭಾ ಸದಸ್ಯ ಆರ್.ಪಿ. ನಂಜುಂಡಸ್ವಾಮಿ, ಮಧುವನಹಳ್ಳಿ ಶಿವಕುಮಾರ್, ಮಾಂಬಳ್ಳಿ ನಂಜುಂಡಸ್ವಾಮಿ, ಸುಹೇಲ್ ಆಲಿ ಖಾನ್, ಸೈಯದ್ ರಫಿ, ಬ್ಲಾಕ್ ಅಧ್ಯಕ್ಷ ಮುನ್ನಾ, ಗುರುಸ್ವಾಮಿ, ರಾಜ್ಯ ಎಸ್ಟಿ ಘಟಕದ ಪ್ರಧಾನ ಕಾರ್ಯದರ್ಶಿ ಪು.ಶ್ರೀನಿವಾಸನಾಯಕ ಇತರರು ಪಾಲ್ಗೊಂಡಿದ್ದರು.

12ರಂದು ಹೆಗ್ಗವಾಡಿಯಲ್ಲಿ ಪುಣ್ಯಸ್ಮರಣೆ

‘ಅವರ ಸ್ವಗ್ರಾಮ ಹೆಗ್ಗವಾಡಿಯಲ್ಲಿ 12ರಂದು ನಡೆಯುವ ಪ್ರಥಮ ವರ್ಷದ ಪುಣ್ಯಾರಾಧನೆ ನಡೆಯಲಿದೆ. ಅವರ ಪುತ್ರ ಶಾಸಕ ದರ್ಶನ್ ಧ್ರುವನಾರಾಯಣ ಆಯೋಜನೆ ಮಾಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಶಿವಕುಮಾರ್ ಸಚಿವರು ಹಾಗೂ ಶಾಸಕರು  ಭಾಗವಹಿಸಲಿದ್ದಾರೆ. ಚಾಮರಾಜನಗರ ತಾಲ್ಲೂಕಿನಿಂದಲೇ 10 ಸಾವಿರ ಮಂದಿ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಬೇಕು’ ಎಂದು ಮರಿಸ್ವಾಮಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT