ಸಂತೇಮರಹಳ್ಳಿ: ಗ್ರಾಮೀಣ ಪ್ರದೇಶದ ಮಹಿಳೆಯರು ಗುಡಿ ಕೈಗಾರಿಕೆ ಅವಲಂಬಿಸಿಕೊಂಡು ಸ್ವಾವಲಂಬಿ ಜೀವನ ನಡೆಸಲು ಮುಂದಾಗಬೇಕು ಎಂದು ಯಳಂದೂರು ಪಶು ಆಸ್ಪತ್ರೆ ಸಹಾಯಕ ನಿರ್ದೇಶಕ ಕೆ.ಶಿವರಾಜು ತಿಳಿಸಿದರು.

ಇಲ್ಲಿನ ಕೃಷಿ ಮಾರುಕಟ್ಟೆ ಆವರಣದಲ್ಲಿ ಶುಕ್ರವಾರ ಕೇಂದ್ರ ಸರ್ಕಾರದ ಪೌಲ್ಟ್ರಿ ಫೆಡರೇಷನ್ ಹಾಗೂ ಯಳಂದೂರು ತಾಲ್ಲೂಕು ಪಶು ಆಸ್ಪತ್ರೆ ವತಿಯಿಂದ ತಾಲ್ಲೂಕಿನ ರೈತ ಮಹಿಳೆಯರಿಗೆ ಉಚಿತವಾಗಿ ಕೋಳಿ ಮರಿ ವಿತರಿಸಿ ಅವರು ಮಾತನಾಡಿದರು.

ಕೇಂದ್ರ ಸರ್ಕಾರದ ಪೌಲ್ಟ್ರಿ ಫೆಡರೇಷನ್ ವತಿಯಿಂದ ಗ್ರಾಮೀಣ ಪ್ರದೇಶದ ರೈತ ಮಹಿಳೆಯರಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೋಳಿ ಮರಿಗಳನ್ನು ನೀಡಲಾಗುತ್ತಿದೆ. ಮಹಿಳೆಯರು ನೀಡಿರುವ ಕೋಳಿ ಮರಿಗಳನ್ನು ಸಾಕಿಕೊಂಡು ಜೀವನ ನಡೆಸುವ ಜತೆಗೆ ಕೋಳಿ ಮೊಟ್ಟೆಯನ್ನು ಸೇವಿಸಿ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಮುಂದಾಗಬೇಕು. ಯಳಂದೂರು ತಾಲ್ಲೂಕಿನ ೪೪ ಫಲಾನುಭವಿಗಳಿಗೆ ಉಚಿತವಾಗಿ ಒಂದು ಫಲಾನುಭವಿಗೆ 20 ಕೋಳಿ ಮರಿಗಳನ್ನು ನೀಡಲಾಗಿದೆ. ಇದರ ನಿರ್ವಹಣೆಯನ್ನು ಫಲಾನುಭವಿಗಳು ಉತ್ತಮ ರೀತಿಯಲ್ಲಿ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಯಳಂದೂರು ಪಶು ಆಸ್ಪತ್ರೆಯ ಬಸವರಾಜು ಸೇರಿದಂತೆ ತಾಲ್ಲೂಕಿನ ಫಲಾನುಭವಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.