ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: ಆಗಸ್ಟ್‌ಗೆ 7 ಲಕ್ಷ ಜನರಿಗೆ ಲಸಿಕೆ ನೀಡುವ ಗುರಿ

Last Updated 5 ಜುಲೈ 2021, 16:46 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಆಗಸ್ಟ್‌ ತಿಂಗಳ ಒಳಗಾಗಿ ಏಳು ಲಕ್ಷ ಜನರಿಗೆ ಕೋವಿಡ್‌ ಲಸಿಕೆ ನೀಡುವ ಗುರಿಯನ್ನು ಜಿಲ್ಲಾಡಳಿತ ಹೊಂದಿದ್ದು, ಇದಕ್ಕೆ ಪೂರಕವಾದ ಸಿದ್ಧತೆಗಳನ್ನು ಕೈಗೊಳ್ಳುತ್ತಿದೆ.

ಚಾಮರಾಜನಗರ, ಗುಂಡ್ಲುಪೇಟೆ, ಕೊಳ್ಳೇಗಾಲ, ಹನೂರು ಹಾಗೂ ಯಳಂದೂರು ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಬರುವ 60 ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಂತೇಮರಹಳ್ಳಿ, ಕಬ್ಬಳ್ಳಿ, ಬೇಗೂರಿನಲ್ಲಿರುವ ಸಮಯದಾಯ ಆರೋಗ್ಯ ಕೇಂದ್ರಗಳು, ಚಾಮರಾಜನಗರ, ಗುಂಡ್ಲುಪೇಟೆ, ಯಳಂದೂರು, ಕೊಳ್ಳೇಗಾಲ, ಹನೂರು ತಾಲ್ಲೂಕು ಕೇಂದ್ರಗಳಲ್ಲಿರುವ ಆಸ್ಪತ್ರೆಗಳಲ್ಲಿ ಲಸಿಕೆ ನೀಡಲು ಯೋಜನೆ ರೂಪಿಸಲಾಗಿದೆ.

ಜಿಲ್ಲೆಯಲ್ಲಿ ಇನ್ನೂ 5,74,643 ಮಂದಿಗೆ ಮೊದಲನೇ ಡೋಸ್‌ ಲಸಿಕೆ ನೀಡಬೇಕಾಗಿದೆ. ಈಗಾಗಲೇ ಮೊದಲ ಡೋಸ್‌ ಪಡೆದಿರುವ 1,30,904 ಮಂದಿಗೆ ಎರಡನೇ ಡೋಸ್‌ ನೀಡಬೇಕಾಗಿದೆ. ಈವರೆಗೆ 3.12 ಲಕ್ಷ ಮಂದಿಗೆ ಲಸಿಕೆ ನೀಡಲಾಗಿದೆ. ಈ ಪೈಕಿ 2,62,548 ಮಂದಿ ಮೊದಲ ಡೋಸ್‌ ಹಾಗೂ 49,990 ಮಂದಿ ಎರಡನೇ ಡೋಸ್‌ ಪಡೆದಿದ್ದಾರೆ.

‘ಕೋವಿಡ್‌ ವಿರುದ್ಧದ ಪ್ರಮುಖ ಅಸ್ತ್ರವೆಂದೇ ಪರಿಗಣಿಸಲಾಗಿರುವ ಲಸಿಕೆಯನ್ನು ನೀಡಲು ವಿಶೇಷ ಶಿಬಿರಗಳನ್ನು ಆಯೋಜಿಸಿ, ವಾರ್ಡ್‌ವಾರು ಗ್ರಾಮ ಪಂಚಾಯಿತಿವಾರು, ಲಸಿಕೆ ನೀಡಲು ಅಭಿಯಾನ ಆರಂಭಿಸಲಾಗಿದೆ. ಆಗಸ್ಟ್ ಅಂತ್ಯದೊಳಗೆ ಹೆಚ್ಚಿನ ಜನತೆ ಲಸಿಕೆ ಪಡೆಯಬೇಕು ಎಂಬ ಉದ್ದೇಶದಿಂದ ಸೂಕ್ಷ್ಮ ಕಾರ್ಯಯೋಜನೆಯನ್ನು ಸಿದ್ಧಪಡಿಸಿದ್ದು, ಇದರ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಲಸಿಕಾ ಅಭಿಯಾನಕ್ಕೆ ಜಿಲ್ಲೆಯ ಜನರು ಸಹಕಾರ ನೀಡಬೇಕು’ ಎಂದು ಜಿಲ್ಲಾಧಿಕಾರಿ ಡಾ.ಎಂ.ಅರ್.ರವಿ ಅವರು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT