ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟಿಸಿ ಶಾಸಕ ಪುಟ್ಟರಂಗಶೆಟ್ಟಿ ಮಾತನಾಡಿದರು
ಜಾತಿ ಮತ ಮೀರಿದ ಕ್ರೀಡೆ ದಸರಾ ಕ್ರೀಡಾಕೂಡ ಉದ್ಘಾಟಿಸಿ ಶಾಸಕ ಪುಟ್ಟರಂಗಶೆಟ್ಟಿ
‘ಜಾತಿ ಮತ ಧರ್ಮ ಬೇಧದಿಂದ ಮುಕ್ತವಾಗಿರುವ ಕ್ರೀಡೆ ಎಲ್ಲರನ್ನೂ ಒಂದು ಗೂಡಿಸುವ ಶಕ್ತಿ ಹೊಂದಿದೆ. ಜಿಲ್ಲೆಯು ಜಾನಪದ ಕಲೆ ಸಂಸ್ಕೃತಿಗೆ ಹೆಸರುವಾಸಿಯಾಗಿರುವಂತೆ ಕ್ರೀಡಾ ಕ್ಷೇತ್ರದಲ್ಲಿ ಪ್ರಸಿದ್ಧಿ ಪಡೆಯಬೇಕು. ಕ್ರೀಡೆಯಲ್ಲಿ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಸಾಧನೆ ಮಾಡಬೇಕು. ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟದಲ್ಲಿ ವಿಜೇತರಾದವರು ರಾಜ್ಯ ದೇಶ ಹಾಗೂ ಅಂತರ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆಯಬೇಕು ಜಿಲ್ಲೆಗೆ ಕೀರ್ತಿ ತರಬೇಕು ಕ್ರೀಡೆಯಲ್ಲಿ ಪ್ರತಿಭೆ ಪ್ರದರ್ಶಿಸಲು ಮುಕ್ತ ಅವಕಾಶವಿದ್ದು ಅರ್ಹರು ಮಾತ್ರ ಯಶಸ್ವಿಯಾಗುತ್ತಾರೆ’ ಎಂದರು.