ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂತೇಮರಹಳ್ಳಿ: ತಾಯಿ ಮಕ್ಕಳ ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ 

Published 27 ಫೆಬ್ರುವರಿ 2024, 13:49 IST
Last Updated 27 ಫೆಬ್ರುವರಿ 2024, 13:49 IST
ಅಕ್ಷರ ಗಾತ್ರ

ಸಂತೇಮರಹಳ್ಳಿ: ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಿದಂಬರ ಮಂಗಳವಾರ ಭೇಟಿನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಆಸ್ಪತ್ರೆಯ ಶೌಚಾಲಯ, ಕುಡಿಯುವ ಬಿಸಿನೀರು, ಸ್ವಚ್ಫತೆ, ಸಿಬ್ಬಂದಿ ಹಾಜರಾತಿ, ರೋಗಿಗಳ ಹಾಗೂ ಹೆರಿಗೆ ವಾರ್ಡ್‌‌‌ಗಳಿಗೆ ಭೇಟಿ ನೀಡಿ ರೋಗಿಗಳಿಂದ ಆಸ್ಪತ್ರೆಯಲ್ಲಿ ದೊರಕುವ ಸೌಲಭ್ಯ ಹಾಗೂ ಚಿಕಿತ್ಸೆ ಸಂಬಂಧ ಮಾಹಿತಿ ಪಡೆದುಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿ, ‘60 ಹಾಸಿಗೆಯುಳ್ಳ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಹಿನ್ನೆಲೆಯಲ್ಲಿ ನಿರಂತರವಾಗಿ ರೋಗಿಗಳು ಆಸ್ಪತ್ರೆಗೆ ಬರುತ್ತಾರೆ. ಈ ವೇಳೆಯಲ್ಲಿ ವೈದ್ಯಾಧಿಕಾರಿಗಳು ಬೆಳಿಗ್ಗೆ ಹಾಗೂ ರಾತ್ರಿ ವೇಳೆಯಲ್ಲಿ ಕಡ್ಡಾಯವಾಗಿ ತಮ್ಮ ಕೆಲಸದ ಸಮಯದಲ್ಲಿ ಹಾಜರಿರಬೇಕು. ಆಸ್ಪತ್ರೆಯಲ್ಲಿ ಬಿಸಿ ನೀರು ದೊರಕುವ ಸ್ಥಳದಲ್ಲಿ ನಾಮಫಲಕ ಆಳವಡಿಸಬೇಕು. ರೋಗಿಗಳ ಜೊತೆ ಸಿಬ್ಬಂದಿ ಪ್ರೀತಿ ವಿಶ್ವಾಸದಿಂದ ಚಿಕಿತ್ಸೆ ನೀಡಬೇಕು. ಆಸ್ಪತ್ರೆಯಲ್ಲಿ ಸ್ವಚ್ಫತೆಗೆ ಹೆಚ್ಚು ಆದ್ಯತೆ ನೀಡಬೇಕು’ ಎಂದು ಸೂಚನೆ ನೀಡಿದರು.

ಆಡಳಿತ ವೈದ್ಯಾಧಿಕಾರಿ ಡಾ.ರೇಣುಕಾದೇವಿ ಮಾತನಾಡಿ, ‘ಆಸ್ಪತ್ರೆ ಕೊಳವೆ ಬಾವಿಯಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ನೀರಿನ ಸಮಸ್ಯೆ ಉಂಟಾಗಿದೆ. ಟ್ಯಾಂಕರ್ ಮೂಲಕ ಆಸ್ಪತ್ರೆಗೆ ನೀರು ಪೂರೈಕೆ ಮಾಡಲಾಯಿತು. ಈಗ ಆಸ್ಪತ್ರೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ’ ಎಂದರು.

‘ಬೇಸಿಗೆ ಆರಂಭವಾಗುವ ಹಿನ್ನೆಲೆಯಲ್ಲಿ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಆಸ್ಪತ್ರೆ ಆವರಣದಲ್ಲಿ ಕೊಳವೆ ಬಾವಿ ಕೊರೆಸುವ ಸಂಬಂಧ ಕ್ರಮಕೈಗೊಳ್ಳಿ’ ಎಂದು ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT