ಚಾಮರಾಜನಗರ: ಸಂಭಾವ್ಯ ಕೋವಿಡ್ ಮೂರನೇ ಅಲೆಯನ್ನು ಸಮರ್ಥವಾಗಿ ಎದುರಿಸುವ ಉದ್ದೇಶದಿಂದ ಜಿಲ್ಲೆಯಲ್ಲಿ ಕೈಗೊಳ್ಳುತ್ತಿರುವ ಕಣ್ಗಾವಲು ಸಮೀಕ್ಷೆಯನ್ನು ಯಶಸ್ವಿಯಾಗಿ ನಿರ್ವಹಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಬಿ.ಕಾವೇರಿ ಅವರು ಬುಧವಾರ ಸೂಚನೆ ನೀಡಿದರು.

ಜಿಲ್ಲೆಯ ಅಭಿವೃದ್ದಿ ಕಾರ್ಯಗಳು, ಪ್ರವಾಹ ನಿರ್ವಹಣೆ, ಕೋವಿಡ್ ಹರಡುವಿಕೆ ತಡೆ ಮತ್ತು ಲಸಿಕೆ ಕಾರ್ಯ ಸೇರಿದಂತೆ ಇತರೆ ಪ್ರಮುಖ ಇಲಾಖೆಗಳ ಕಾರ್ಯಕ್ರಮ ಅನುಷ್ಠಾನ ಕುರಿತ ಸಭೆಯಲ್ಲಿ ಮಾತನಾಡಿದ ಅವರು, ‘ಮೂರನೇ ಅಲೆ ಎದುರಿಸಲು ಬೇಕಾದ ವ್ಯವಸ್ಥೆ ಮಾಡಲು ಸಮೀಕ್ಷೆ ನೆರವಾಗಲಿದೆ. ಈ ಉದ್ದೇಶದಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬೆಂಗಳೂರಿನ ಐಪಿಎಚ್ ಸಂಸ್ಥೆ, ವೈದ್ಯಕೀಯ ಕಾಲೇಜಿನ ಮೈಕ್ರೋ ಬಯಾಲಜಿ, ಕಮ್ಯುನಿಟಿ ಮೆಡಿಸಿನ್ ವಿಭಾಗಗಳ ಸಹಯೋಗದೊಂದಿಗೆ ಕೈಗೊಂಡಿರುವ ಸಮೀಕ್ಷೆ ಕಾರ್ಯ ಸಮರ್ಪಕವಾಗಿ ನಿರ್ವಹಿಸಬೇಕು’ ಎಂದರು.

‘ಲಸಿಕೆ ನೀಡುವ ಕಾರ್ಯದಲ್ಲಿ ಹೆಚ್ಚಿನ ಪ್ರಗತಿಯಾಗಬೇಕು. ಗರ್ಭಿಣಿಯರು, ಬಾಣಂತಿಯರಿಗೂ ಕೋವಿಡ್ ಲಸಿಕೆ ನೀಡುವಲ್ಲಿ ಮಾಹಿತಿ ತಿಳಿವಳಿಕೆ ನೀಡಿ ಪೂರ್ಣ ಪ್ರಮಾಣದಲ್ಲಿ ನಿಗದಿತ ಗುರಿ ತಲುಪಬೇಕು’ ಎಂದರು.

ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಮಾತನಾಡಿ, ‘ಗರ್ಭಿಣಿ, ಬಾಣಂತಿಯರಿಗೆ ಲಸಿಕೆ ನೀಡುವ ಕಾರ್ಯವನ್ನು ಆದ್ಯತೆ ಮೇರೆಗೆ ಕೈಗೊಳ್ಳಬೇಕು. ಇದಕ್ಕಾಗಿಯೇ ಕಾರ್ಯಯೋಜನೆ ಹಾಕಿಕೊಂಡು ಪ್ರತ್ಯೇಕ ತಂಡ ರಚಿಸಿ ಲಸಿಕೆ ನೀಡಲು ಉತ್ತೇಜನ ನೀಡಬೇಕು’ ಎಂದರು.

ಬಿ.ಬಿ. ಕಾವೇರಿ ಅವರು ಮಾತನಾಡಿ, ‘ಅರಣ್ಯದಂಚಿನ ನಿವಾಸಿಗಳು, ಆದಿವಾಸಿಗಳಿಗೆ ಲಸಿಕೆ ಮಹತ್ವದ ಬಗ್ಗೆ ಅರಿವು ಮೂಡಿಸಬೇಕು. ವಿಶೇಷ ವರ್ಗಗಳ ಫಲಾನುಭವಿಗಳು ಆದ್ಯತಾ ಗುಂಪುಗಳಿಗೆ ತ್ವರಿತ ಗತಿಯಲ್ಲಿ ಲಸಿಕೆ ನೀಡುವ ಕಾರ್ಯ ಪೂರ್ಣಗೊಳಿಸಬೇಕು’ ಎಂದರು.

ಪ್ರವಾಹ ಎದುರಿಸಲು ಸಿದ್ಧರಾಗಿ: ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಎದುರಿಸಲು ಕೈಗೊಂಡಿರುವ ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು, ‘ಈ ಹಿಂದೆ ಪ್ರವಾಹ ಪರಿಸ್ಥಿತಿ ತಲೆದೋರಿದ್ದ ಗ್ರಾಮಗಳಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಈಗಿನಿಂದಲೇ ತರಬೇತಿ ಮುಖಾಂತರ ಅಧಿಕಾರಿ ಸಿಬ್ಬಂದಿಯನ್ನು ಸನ್ನದ್ಧಗೊಳಿಸಿರಬೇಕು’ ಎಂದು ಸಲಹೆ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೊಯರ್ ನಾರಾಯಣ ರಾವ್,ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಕಾತ್ಯಾಯಿನಿದೇವಿ, ಉಪವಿಭಾಗಾಧಿಕಾರಿ ಗಿರೀಶ್ ದಿಲೀಪ್ ಬದೋಲೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಂ.ಸಿ. ರವಿ, ಆರ್.ಸಿ.ಎಚ್ ಅಧಿಕಾರಿ ಡಾ. ವಿಶ್ವೇಶ್ವರಯ್ಯ, ಸರ್ವಲೆನ್ಸ್ ಅಧಿಕಾರಿ ಡಾ. ನಾಗರಾಜು, ಜಿಲ್ಲಾ ಆಸ್ಪತ್ರೆಯ ನೋಡಲ್ ಅಧಿಕಾರಿ ಡಾ. ಮಹೇಶ್, ವೈದ್ಯಕೀಯ ಕಾಲೇಜಿನ ಮಕ್ಕಳ ವಿಭಾಗದ ಮುಖ್ಯಸ್ಥೆ ಡಾ.ಸುಗುಣ, ತಹಶೀಲ್ದಾರರಾದ ಚಿದಾನಂದ ಗುರುಸ್ವಾಮಿ, ರವಿಶಂಕರ್, ನಾಗರಾಜು, ಕೆ.ಕುನಾಲ್ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.