ಚಾಮರಾಜನಗರ: ಅಂಗವಿಕಲರೊಬ್ಬರಿಗೆ ಬಹು ವರ್ಷಗಳಿಂದ ಆಧಾರ್ ಕಾರ್ಡ್ ಪಡೆಯಲು ತೊಡಕಾಗಿದ್ದ ಸಮಸ್ಯೆಯನ್ನು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಪರಿಹರಿಸಿ ಕಾರ್ಡ್ ವಿತರಿಸಿದರು.

ತಾಲ್ಲೂಕಿನ ತಮ್ಮಡಹಳ್ಳಿಯ ಭಾಗ್ಯ ಎಂಬುವವರು ಅಂಧರಾಗಿದ್ದು ಆಧಾರ್ ಕಾರ್ಡ್ ಪಡೆಯುವ ಸಲುವಾಗಿ ನಡೆಸುವ ಕಣ್ಣಿನ ಪೂರ್ವ ತಪಾಸಣೆ ಸಂದರ್ಭದಲ್ಲಿ ಕಣ್ಣಿನ ತೊಂದರೆಯಿಂದ ಏರಿಳಿತವಾಗುತ್ತಿದ್ದರಿಂದ ಇವರಿಗೆ ಕಾರ್ಡ್ ಪಡೆಯಲು ಸಾಧ್ಯವಾಗಿರಲಿಲ್ಲ.

2024ರ ಡಿಸೆಂಬರ್ 19ರಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾಮಟ್ಟದ ಅಂಗವಿಕಲರ ಕುಂದು ಕೊರತೆ ಸಭೆಯಲ್ಲಿ ಭಾಗ್ಯ ಅವರು ಆಧಾರ್ ನೋಂದಣಿಯಾಗದಿರುವ ಸಮಸ್ಯೆಯನ್ನು ಗಮನಕ್ಕೆ ತಂದಿದ್ದರು. ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಭಾಗ್ಯ ಅವರಿಗೆ ಆಧಾರ್ ನೊಂದಣಿಗೆ ವಿಶೇಷ ಕ್ರಮ ವಹಿಸಲು ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಇವರ ಆಧಾರ್ ನೊಂದಣಿಗೆ ಇದ್ದ ತೊಂದರೆಗಳನ್ನು ವಿವರವಾಗಿ ಪಟ್ಟಿ ಮಾಡಿ ಇ-ಆಡಳಿತ ಕೇಂದ್ರಕ್ಕೆ ಕಳುಹಿಸಿ ಆಧಾರ್ ಕಾರ್ಡ್ ಪಡೆಯಲು ಪತ್ರ ಕಳುಹಿಸಲಾಗಿತ್ತು. ತೀವ್ರತರವಾದ ಅಂಗವಿಕಲರಿಗೆ ಯುಡಿಐಡಿ ಕಾರ್ಡ್ ಮಾಡಿಸುವಂತೆಯೂ ಜಿಲ್ಲಾಧಿಕಾರಿ ಸೂಚನೆ ನೀಡಿದ್ದರು.

ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಜಿಲ್ಲಾಮಟ್ಟದ ಆಧಾರ್ ಕೇಂದ್ರ ಅಧಿಕಾರಿಗಳು ಸತತವಾಗಿ ಪ್ರಯತ್ನಿಸಿ ಭಾಗ್ಯ ಅವರಿಗೆ ಆಧಾರ್ ನೋಂದಣಿಗೆ ಇದ್ದ ತೊಡಕುಗಳನ್ನು ಪರಿಹರಿಸಿದ್ದಾರೆ. ಕೊನೆಗೂ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರ ವಿಶೇಷ ಕಾಳಜಿಯಿಂದ ಭಾಗ್ಯ ಅವರಿಗೆ ಆಧಾರ್ ಕಾರ್ಡ್ ದೊರೆತಿದೆ. ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರಿಂದಲೇ ಭಾಗ್ಯ ಅವರು ಇಂದು ಆಧಾರ್ ಕಾರ್ಡ್ ಪಡೆದು ಸಂತಸ ವ್ಯಕ್ತಪಡಿಸಿದ್ದಾರೆ.

ಪದವಿ ಪೂರ್ಣಗೊಳಿಸಿರುವ ನನಗೆ ಆಧಾರ್ ಇಲ್ಲದ ಕಾರಣ ಭವಿಷ್ಯಕ್ಕೆ ತೊಂದರೆಯಾಗುತ್ತಿತ್ತು. ಜಿಲ್ಲಾಧಿಕಾರಿಗಳ ವಿಶೇಷ ಆಸಕ್ತಿಯಿಂದ ನನಗೆ ಆಧಾರ್ ಕಾರ್ಡ್ ಬಂದಿದೆ. ಇದಕ್ಕಾಗಿ ಜಿಲ್ಲಾಧಿಕಾರಿಯವರಿಗೆ ತುಂಬು ಕೃತಜ್ಞತೆಗಳನ್ನ ಸಲ್ಲಿಸುತ್ತೇನೆ. ಬಹು ವರ್ಷಗಳ ಸಮಸ್ಯೆ ಪರಿಹಾರವಾಗಿದ್ದು ಮುಂದಿನ ಬದುಕಿಗೆ ಉತ್ಸಾಹ ದೊರೆತಿದೆ ಎಂದು ಭಾಗ್ಯ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.