ಶನಿವಾರ, ಡಿಸೆಂಬರ್ 4, 2021
24 °C

ಸಂತೇಮರಹಳ್ಳಿ: ಬಾಗಳಿಯಲ್ಲಿ ಡಿಸಿ ವಾಸ್ತವ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani Photo

ಚಾಮರಾಜನಗರ: ಜಿಲ್ಲಾಧಿಕರಿಗಳ ನಡೆ ಹಳ್ಳಿಗಳ‌ ಕಡೆ ಕಾರ್ಯಕ್ರಮದ ಭಾಗವಾಗಿ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ತಾಲ್ಲೂಕಿನ ಸಂತೇಮರಹಳ್ಳಿ ಹೋಬಳಿಯ ಬಾಗಳಿ ಗ್ರಾಮದಲ್ಲಿ ಶನಿವಾರ ವಾಸ್ತವ್ಯ ಹೂಡಲಿದ್ದಾರೆ.

ಮಧ್ಯಾಹ್ನ 12 ಗಂಟೆಗೆ ಗ್ರಾಮಕ್ಕೆ ಬಂದ ಜಿಲ್ಲಾಧಿಕಾರಿ ಅವರನ್ನು ಗ್ರಾಮಸ್ಥರು ಆತ್ಮೀಯವಾಗಿ ಬರಮಾಡಿಕೊಂಡರು. ಅಲಂಕೃತ ಎತ್ತಿನ ಗಾಡಿಯಲ್ಲಿ ಜಿಲ್ಲಾಧಿಕಾರಿ ಅವರನ್ನು ಮೆರವಣಿಗೆ ಮಾಡಿ ವಾಸ್ತವ್ಯ ಹೂಡಲಿರುವ ಸ್ಥಳಕ್ಕೆ (ಸರ್ಕಾರಿ ಪ್ರೌಢ ಶಾಲೆ ಆವರಣ) ಕರೆದುಕೊಂಡು ಬಂದರು.

12 ಗಂಟೆಗೆ ವೇದಿಕೆ ಕಾರ್ಯಕ್ರಮ ಆರಂಭವಾಗಿದ್ದು, ಜನರ ಕುಂದು‌ಕೊರತೆಗಳನ್ನು ಜಿಲ್ಲಾಧಿಕಾರಿ ಅವರು ಆಲಿಸುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು