ಮಂಗಳವಾರ, 26 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಯಿಗಳು ದಾಳಿ: ಏಳು ಕುರಿಗಳ ಸಾವು

Published 30 ಜುಲೈ 2023, 14:43 IST
Last Updated 30 ಜುಲೈ 2023, 14:43 IST
ಅಕ್ಷರ ಗಾತ್ರ

ಗುಂಡ್ಲುಪೇಟೆ: ನಾಯಿಗಳ ಹಿಂಡು ದಾಳಿ ನಡೆಸಿದ ಪರಿಣಾಮ ಏಳು ಕುರಿಗಳು ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಕೆಬ್ಬೇಪುರ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಮಾದಶೆಟ್ಟಿ ಎಂಬುವವರಿಗೆ ಸೇರಿದ ಕುರಿಗಳು ಕೊಟ್ಟಿಗೆಯಲ್ಲಿ ಇದ್ದ ವೇಳೆ ನಾಯಿಗಳು ದಾಳಿ ನಡೆಸಿಕೊಂದು ಹಾಕಿವೆ. ಘಟನೆಯಿಂದ ಮಾಲಿಕ ಬೆಚ್ಚಿ ಬಿದ್ದಿದ್ದು, ಘಟನೆ ಹಿನ್ನಲೆ ತೀವ್ರ ನಷ್ಟ ಉಂಟಾಗಿದೆ.

ಗ್ರಾಮದಲ್ಲಿ ನಾಯಿಗಳ ಹಾವಳಿ ಹೆಚ್ಚಿದ್ದು ಆಗಾಗ್ಗೆ ಜನ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಲೇ ಇವೆ. ಆದ್ದರಿಂದ ಗ್ರಾಮ ಪಂಚಾಯಿತಿ ಆಡಳಿತ ನಾಯಿಗಳಿಗೆ ಕಡಿವಾಣ ಹಾಕುವ ಜೊತೆಗೆ ಕುರಿ ಕಳೆದುಕೊಂಡ ರೈತನಿಗೆ ಸೂಕ್ತ ಪರಿಹಾರ ದೊರಕಿಸಿಕೊಡಬೇಕೆಂದು ಸ್ಥಳೀಯ ರೈತರು ಹಾಗೂ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT