ಕೊಳ್ಳೇಗಾಲ: ಹನೂರು ಕ್ಷೇತ್ರದಲ್ಲಿ ಜಲ ಜೀವನ್ ಮಿಷನ್ ಕುಡಿಯುವ ನೀರಿನ ಯೋಜನೆಯನ್ನು ಆದಷ್ಟು ಬೇಗನೆ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು ಎಂದು ಹನೂರು ಶಾಸಕ ಎಂ.ಆರ್.ಮಂಜುನಾಥ್ ಸೂಚನೆ ನೀಡಿದರು.

ನಗರದ ಕಾವೇರಿ ವನ್ಯಜೀವಿ ವಿಭಾಗ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಜಲ ಜೀವನ್ ಮಿಷನ್ ಯೋಜನೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿ ಮಾತನಾಡಿದರು. ಗ್ರಾಮೀಣ ಭಾರತದ ಎಲ್ಲಾ ಮನೆಗಳಿಗೆ ಸುರಕ್ಷಿತ ಮತ್ತು ಸಮರ್ಪಕ ಕುಡಿಯುವ ನೀರನ್ನು ಒದಗಿಸುವ ಈ ಯೋಜನೆ ಪೂರ್ಣಗೊಂಡರೆ ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಇರುವುದಿಲ್ಲ ಎಂದರು.

ಹನೂರು ಕ್ಷೇತ್ರ ಮಲೆ ಮಹದೇಶ್ವರ ವನ್ಯ ಜೀವಿ ಧಾಮ, ಕಾವೇರಿ ವನ್ಯಜೀವಿ ವಿಭಾಗ ಹಾಗೂ ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶವನ್ನು ಒಳಗೊಂಡಂತಿದೆ. ಯೋಜನೆಯ ಪೈಪ್ಲೈನ್ ಕಾಮಗಾರಿ ಹಾಗೂ ಟ್ಯಾಂಕ್ ನಿರ್ಮಾಣ ಕಾಮಗಾರಿಗಳಿಗೆ ಅರಣ್ಯ ಇಲಾಖೆಯು ಒಪ್ಪಿಗೆ ಪಡೆಯುವ ಕೆಲಸಗಳು ತ್ವರಿತವಾಗಿ ಆಗ ಬೇಕು. ಯೋಜನೆ ಪೂರ್ಣಗೊಂಡು ಪ್ರತಿ ಹಳ್ಳಿ ಗಳಿಗೂ ಯೋಜನೆಯ ಉಪಯೋಗ ಸಿಗಬೇಕಿದೆ. ಹಾಗಾಗಿ ಗ್ರಾಮೀಣ ಕುಡಿಯುವ ನೀರು ಹಾಗೂ ನೈ ರ್ಮಲ್ಯ ಇಲಾಖೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಕಾಮಗಾರಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಕ್ರಮವಹಿಸಬೇಕೆಂದು ಸೂಚನೆ ನೀಡಿದರು.

ಈ ವೇಳೆ ಇಲಾಖೆ ಅಧಿಕಾರಿಗಳಿಂದ ಜಲ ಜೀವನ್ ಮಿಷನ್ ಯೋಜನೆಯ ಪ್ರಗತಿ ಬಗ್ಗೆ ಮಾಹಿತಿ ಪಡೆದು ಕೊಂಡರು.ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯರ್ವಾಹಕ ಅಧಿಕಾರಿ ಮೋನಾ ರೋತ್, ಡಿಸಿಎಫ್ ಭಾಸ್ಕರ್, ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಸೂಪರಿಂಟೆಂಡೆಂಟ್ ಎಂಜಿನಿಯರ್ ವೀರಪ್ಪ, ಇಇ ಜಗದೀಶ್, ಎಇಇ ಸುಧನ್ವನಾಗ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.