ಗುಂಡ್ಲುಪೇಟೆ: ತಾಲ್ಲೂಕಿನ ಮೂಖಹಳ್ಳಿ ಸರ್ಕಾರಿ ಕಿರಿಯ ಶಾಲೆ ಕಾಂಪೌಂಡ್ಗೆ ಹೊಂದಿಕೊಂಡಿರುವ ಚರಂಡಿಯಲ್ಲಿ ಹೂಳು ತುಂಬಿದ ಪರಿಣಾಮ ಕೊಳಚೆ ನೀರು ರಸ್ತೆ ಮೇಲೆ ಹರಿಯುತ್ತಿದೆ. ಇದರಿಂದ ಶಾಲಾ ಮಕ್ಕಳು ದುರ್ವಾಸನೆಯಲ್ಲಿ ಪಾಠ ಕೇಳುವ ಪರಿಸ್ಥಿತಿ ನಿರ್ಮಾಣವಾಗಿದೆ.

ಮೂಖಹಳ್ಳಿ ಗ್ರಾಮ ಪಂಚಾಯಿತಿ ಕೇಂದ್ರವಾಗಿದ್ದು, ಗ್ರಾಮದಲ್ಲಿ ಉತ್ಪತ್ತಿಯಾಗುವ ಕೊಳಚೆ ನೀರು ಚರಂಡಿಗಳ ಮೂಲಕ ಹರಿದು ಶಾಲಾ ಕಾಂಪೌಂಡ್ ಬದಿಯಲ್ಲಿರುವ ನಿಲ್ಲುತ್ತಿದೆ. ಇದರಿಂದ ಚರಂಡಿಯಲ್ಲಿ ಕಳೆದ ಹಲವು ತಿಂಗಳುಗಳಿಂದಲೂ ಕಸಕಡ್ಡಿ, ಪ್ಲಾಸ್ಟಿಕ್ ತ್ಯಾಜ್ಯಗಳು ಶೇಖರಣೆಯಾಗುತ್ತಿದೆ.

ಈ ಕಾರಣದಿಂದ ನೀರು ಸರಾಗವಾಗಿ ಮುಂದೆ ಹರಿದು ಹೋಗಲು ಸಾಧ್ಯವಾಗದೆ ನಿಂತಿದ್ದು, ಸುತ್ತಲ ಪ್ರದೇಶವೆಲ್ಲ ಗಬ್ಬೆದ್ದು ನಾರುತ್ತಿದೆ. ಜೊತೆಗೆ ರಸ್ತೆ ಮೇಲೆ ಕೊಳಚೆ ನೀರು ಹರಿಯುವಂತಾಗಿದೆ. ಈ ಬಗ್ಗೆ ಗ್ರಾಪಂ ಅಭಿವೃದ್ಧಿ ಅಧಿಕಾರಿ ಹಾಗೂ ಸದಸ್ಯರು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ.

‘ಶಾಲಾ ಕಾಂಪೌಂಡ್ ಬದಿಯ ಚರಂಡಿಯಲ್ಲಿ ಕೊಳಚೆ ನೀರು ನಿಲ್ಲುತ್ತಿರುವ ಕಾರಣ ಡೆಂಗಿ, ಚಿಕನ್ ಗುನ್ಯಾ ಇತರೆ ಸಾಂಕ್ರಾಮಿಕ ರೋಗಗಳು ಹರಡುವ ಭೀತಿಯಲ್ಲಿ ಗ್ರಾಮಸ್ಥರು ಹಾಗೂ ಶಾಲಾ ಮಕ್ಕಳಿದ್ದಾರೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಂಡು ಚರಂಡಿಯಲ್ಲಿ ತುಂಬಿರುವ ಹೂಳು ತೆರವುಗೊಳಿಸಬೇಕು’ ಎಂದು ಆಗ್ರಹಿಸಿದ್ದಾರೆ.

ಶಾಲಾ ಕಾಂಪೌಂಡ್ಗೆ ಹೊಂದಿಕೊಂಡಿರುವ ಚರಂಡಿಯಲ್ಲಿ ತುಂಬಿರುವ ಹೂಳನ್ನು ಕೂಡಲೇ ತೆಗೆಸಲಾಗುವುದು. ಗ್ರಾಪಂ ಅನುದಾನ ಬಳಸಿ ರಸ್ತೆ ಮತ್ತು ಸುಸಜ್ಜಿತ ಚರಂಡಿ ನಿರ್ಮಾಣಕ್ಕೂ ಕ್ರಮ ವಹಿಸಲಾಗುವುದು
-ಪ್ರಸಾದ್ ಮೂಖಹಳ್ಳಿ ಗ್ರಾ.ಪಂ ಪಿಡಿಒ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.