ಸೋಮವಾರ, ಆಗಸ್ಟ್ 15, 2022
24 °C

ಡ್ರಗ್ಸ್‌ ವ್ಯವಹಾರ: ತಪ್ಪು ಮಾಡಿದವರಿಗೆ ಶಿಕ್ಷೆ ಖಚಿತ–ಎಸ್‌.ಟಿ.ಸೋಮಶೇಖರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಳ್ಳೇಗಾಲ: ಡ್ರಗ್ಸ್ ವ್ಯವಹಾರದಲ್ಲಿ ಯಾರೇ ಭಾಗಿಯಾಗಿದ್ದರೂ ಅವರನ್ನು ಬಿಡುವುದಿಲ್ಲ ಎಂದು ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಅವರು ಹೇಳಿದರು. 

ಮಹದೇಶ್ವರ ಬೆಟ್ಟಕ್ಕೆ ಹೋಗುವ ದಾರಿ ಮಧ್ಯೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಡ್ರಗ್ಸ್ ಪ್ರಕರಣದಲ್ಲಿ ಕೆಲವು ಶಾಸಕರು ಮತ್ತು ಅವರ ಮಕ್ಕಳ ಹೆಸರುಗಳೂ ಕೇಳಿ ಬರುತ್ತಿವೆ. ತನಿಖೆ ಬಹಳ ಚುರುಕಾಗಿ ನಡೆಯುತ್ತಿದೆ. ತಪ್ಪಿತಸ್ಥರು ಯಾರೇ ಆದರೂ ಶಿಕ್ಷೆ ಖಂಡಿತ. ಕಾನೂನು ಎಲ್ಲರಿಗೂ ಒಂದೇ. ಅದಕ್ಕೆ ಎಲ್ಲರೂ ತಲೆಬಾಗಲೇ ಬೇಕು’ ಎಂದರು.

ದಸರಾ ಉದ್ಘಾಟನೆ ನಾಳೆ ಘೋಷಣೆ: ಈ ವರ್ಷದ ಮೈಸೂರು ದಸರಾ ಉದ್ಘಾಟಕರ ಹೆಸರುಗಳನ್ನು ಶನಿವಾರ (ಸೆ.12) ಘೋಷಿಸಲಾಗುವುದು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಸೋಮಶೇಖರ್‌ ಹೇಳಿದರು. 

‘ಕೋವಿಡ್-19 ವಿರುದ್ಧ ಹೋರಾಟ ನಡೆಸಿದ ಆಶಾ ಕಾರ್ಯಕರ್ತೆಯರು, ವೈದ್ಯರು, ಪೌರಕಾರ್ಮಿಕರು, ಪೊಲೀಸರು, ನರ್ಸ್‍ಗಳ ಮೂಲಕ ದಸರಾಗೆ ಚಾಲನೆ ನೀಡಲಾಗುವುದು ಎಂದು ಈಗಾಗಲೇ ಹೇಳಲಾಗಿದೆ. ಹೆಸರುಗಳನ್ನೂ ಪಟ್ಟಿ ಮಾಡಲಾಗುತ್ತಿದೆ. ಶನಿವಾರ ಸಭೆ ನಡೆಸಿ,  ಇದರ ಬಗ್ಗೆ ಮಾಹಿತಿ ನೀಡುತ್ತೇನೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. 

ಅಡಗೂರು ಎಚ್‌.ವಿಶ್ವನಾಥ್‌ ಅವರನ್ನು ಸಚಿವ ಸಂಪುಟಕ್ಕೆ ಸೇರಿಸುವ ಬಗ್ಗೆ ಕೇಳಿದ ಪ್ರಶ್ನೆಗೆ, ‘ವಿಶ್ವನಾಥ್‌ ಅವರಿಗೆ ಮಂತ್ರಿ ಸ್ಥಾನ ನೀಡುವ ಅಧಿಕಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕೈಯಲ್ಲಿದೆ ವಿನಾ ಇತರ ಸಚಿವರ ಕೈಯಲ್ಲಿ ಇಲ್ಲ’ ಎಂದು ಹೇಳಿದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು