ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಸರ್ಕಾರದ ದೇಶದ ಪ್ರಗತಿ ಅಧೋಗತಿಗೆ: ಇಂದೂಧರ

ಈ ಚುನಾವಣೆಯಲ್ಲಿ ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಮೈತ್ರಿಕೂಟ ಬೆಂಬಲಿಸಲು ಮನವಿ
Published 20 ಏಪ್ರಿಲ್ 2024, 5:05 IST
Last Updated 20 ಏಪ್ರಿಲ್ 2024, 5:05 IST
ಅಕ್ಷರ ಗಾತ್ರ

ಚಾಮರಾಜನಗರ: ‘ಪ್ರಧಾನಿ ಮೋದಿ ಅವರು ದೇಶವನ್ನು ಪ್ರಗತಿಯತ್ತ ಕೊಂಡೊಯ್ಯುವ ಬದಲು ಹಿಮ್ಮುಖವಾಗಿ ತೆಗೆದುಕೊಂಡು ಹೋಗಿದ್ದಾರೆ. ಇಡೀ ದೇಶವನ್ನೇ ಅಧೋಗತಿಗೆ ತಳ್ಳಿದ್ದಾರೆ’ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿ ಸಂಚಾಲಕ ಇಂದೂಧರ ಹೊನ್ನಾಪುರ ಶುಕ್ರವಾರ ಹೇಳಿದರು. 

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೆಹರೂ ಅವರಿಂದ ಹಿಡಿದು ಮನಮೋಹನ್‌ ಸಿಂಗ್‌ ಅವರವರೆಗೆ ಎಲ್ಲರೂ ದೇಶವನ್ನು ಒಂದಲ್ಲ ಒಂದು ರೀತಿಯಲ್ಲಿ ಅಭಿವೃದ್ಧಿಯತ್ತ ಕೊಂಡೊಯ್ದಿದ್ದಾರೆ. ಆದರೆ, ಮೋದಿ ಅವರು ಆ ಕೆಲಸ ಮಾಡಿಲ್ಲ. ಒಂದು ನೀರಾವರಿ ಯೋಜನೆ, ವಿದ್ಯುತ್‌ ಯೋಜನೆ ಜಾರಿಗೆ ತಂದಿಲ್ಲ. ಜನಪರ ಯೋಜನೆಗಳನ್ನು ರೂಪಿಸಿಲ್ಲ. ದೇಶದಲ್ಲಿ ಬಡತನ, ನಿರುದ್ಯೋಗ ಜಾಸ್ತಿಯಾಗಿದೆ’ ಎಂದು ದೂರಿದರು. ಶ್ರೀ

ವೈಜ್ಷಾನಿಕ ಸಂಗತಿಗಳಿಗೆ ಒತ್ತು ನೀಡುವ ಬದಲು, ಅವೈಜ್ಞಾನಿಕ ವಿಚಾರಗಳನ್ನು ಮುನ್ನಲೆಗೆ ತರಲಾಗುತ್ತಿದೆ. ಕಲ್ಯಾಣದ ಕಲ್ಪನೆಯನ್ನು ನಾಶ ಮಾಡಲಾಗಿದೆ. ಕಲ್ಯಾಣ ಯೋಜನೆಗಳನ್ನು ಸ್ಥಗಿತಗೊಳಿಸಲಾಗಿದೆ. ದೇಶದಲ್ಲಿ ಏನೂ ಸಮಸ್ಯೆ ಇಲ್ಲ ಎಂಬ ಭ್ರಮೆಯನ್ನು ಹುಟ್ಟುಹಾಕಲಾಗಿದೆ. ಬಂಡವಾಳ ಶಾಹಿಗಳು, ಕಾರ್ಪೊರೇಟ್‌ ಕಂಪನಿಗಳಿಗೆ ದೇಶದಲ್ಲಿ ಮಣೆಹಾಕಲಾಗುತ್ತಿದೆ’ ಎಂದು ಆರೋಪಿಸಿದರು. 

ಅವತ್ತು ದೇಶದಲ್ಲಿ ಈಸ್ಟ್‌ ಇಂಡಿಯಾ ಕಂಪನಿ ಇತ್ತು. ಈಗ ವೆಸ್ಟ್‌ ಇಂಡಿಯಾ ಕಂಪನಿ ಇದೆ. ಬೆರಳೆಣಿಕೆಯಷ್ಟು ರಾಜಕಾರಣಿಗಳು, ಉದ್ಯಮಿಗಳು, ವೈದಿಕ ಪುರೋಹಿತಶಾಹಿ ಶಕ್ತಿಗಳು ಒಟ್ಟಾಗಿ ಇದೇ ದೇಶವನ್ನು ಅಧಃಪತನಕ್ಕೆ ಇಳಿಸಿವೆ. ಬಿಜೆಪಿಯು ದೇಶವನ್ನು ಶಿಲಾಯುಗಕ್ಕೆ ಕೊಂಡೊ‌ಯ್ಯುತ್ತಿದೆ. ಚಾತುರ್ವರ್ಣ ವ್ಯವಸ್ಥೆಯನ್ನು ಮತ್ತೆ ಜಾರಿಗೆ ತರಲು ಮುಂದಾಗಿದೆ. ದೇಶದ ಸಂವಿಧಾನವನ್ನು ಬದಲಾಯಿಸಲು ಹೊರಟಿದೆ. ಇಂತಹ ಪಕ್ಷ ದೇಶದಲ್ಲಿ ಅಧಿಕಾರಕ್ಕೆ ಬರಬಾರದು ಎಂದು ಹೊನ್ನಾಪುರ ಹೇಳಿದರು. 

‘ದಲಿತ ಚಳವಳಿ ಯಾವಾಗಲೂ ಕಾಂಗ್ರೆಸ್‌ ಪರವಾಗಿರಲಿಲ್ಲ. ಆದರೆ, ರಾಜ್ಯದಲ್ಲಿ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳು ಬಡವರು, ದಲಿತರಿಗೆ ಅನುಕೂಲ ಕಲ್ಪಿಸಿದೆ. ರಾಷ್ಟ್ರಮಟ್ಟದಲ್ಲೂ ಜನಪರವಾದ ವಿವಿಧ ಯೋಜನೆಗಳನ್ನು ಜಾರಿಗೊಳಿಸಲಾಗುವುದು ಎಂದು ಭರವಸೆ ನೀಡಿದೆ. ಆ ಕಾರಣಕ್ಕಾಗಿ ಈ ಚುನಾವಣೆಯಲ್ಲಿ ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿಯು ಅನಿವಾರ್ಯವಾಗಿ ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದೆ’ ಎಂದರು. 

ದಲಿತ ಸಂಘರ್ಷ ಸಮಿತಿಯ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್‌ ಮಾತನಾಡಿ, ‘ಮೋದಿ ಸರ್ಜಾರ 10 ವರ್ಷಗಳಲ್ಲಿ ಸುಳ್ಳುಗಳನ್ನು ಹೇಳುತ್ತಲೇ ಬಂದಿದ್ದಾರೆ. ಅವರು ಕೊಟ್ಟ ಭರವಸೆಗಳನ್ನು ಒಂದೂ ಈಡೇರಿಸಿಲ್ಲ. ಅವರ ಸಂಸದರು ಸಂವಿಧಾನ ಬದಲಾವಣೆಯ ಮಾತುಗಳನ್ನು ಆಡುತ್ತಿದ್ದಾರೆ. ಇಂತಹ ಸರ್ಕಾರ ಈ ದೇಶದಲ್ಲಿ ಮತ್ತೆ ಅಸ್ತಿತ್ವಕ್ಕೆ ಬರಬಾರದು. ಹಾಗಾಗಿ, ಎಲ್ಲರೂ ಬಿಜೆಪಿಯನ್ನು ಸೋಲಿಸಬೇಕು’ ಎಂದರು.  

‘ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿರುವ ಕಾಂಗ್ರೆಸ್‌ ರಾಷ್ಟ್ರಮಟ್ಟದಲ್ಲಿ ಜಾತಿಗಣತಿ ನಡೆಸುವುದು ಸೇರಿದಂತೆ ವಿವಿಧ ಭರವಸೆಗಳನ್ನು ನೀಡಿದೆ. ಕಾಂಗ್ರೆಸ್‌ ಯೋಜನೆಗಳು ಜನಪರವಾಗಿದ್ದು, ಮತದಾರರು ಆ ಪಕ್ಷವನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು. 

ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಗುರುಪ್ರಸಾದ್ ಕೆರೆಗೋಡು, ಸಂಚಾಲಕ ನಾಗರಾಜು ಮಾತನಾಡಿದರು. ಮುಖಂಡರಾದ ಜೀವನಹಳ್ಳಿ ಆರ್‌.ವೆಂಕಟೇಶ್‌, ದೇವಗಳ್ಳಿ ಸೋಮಶೇಖರ್‌ ಇತರರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT