ಗುಂಡ್ಲುಪೇಟೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಒಡೆತನದ ತುಮಕೂರಿನ ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ದಾಳಿ ರಾಜಕೀಯ ಪ್ರೇರಿತ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಕಾರ್ಯದರ್ಶಿ ಗಿರೀಶ್ ಆರ್. ಲಕ್ಕೂರು ಅಸಮಾಧಾನ ಹೊರ ಹಾಕಿದ್ದಾರೆ.

‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಇಡಿಯನ್ನು ದುರ್ಬಳಕೆ ಮಾಡಿಕೊಂಡು ದಾಳಿ ನಡೆಸುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹತ್ತಿಕ್ಕುವ ಹುನ್ನಾರಕ್ಕೆ ಮುಂದಾಗಿದೆ. ದಲಿತ ನಾಯಕ ರಾಜಕಾರಣದಲ್ಲಿ ಬೆಳೆಯುವುದನ್ನು ಕೇಂದ್ರದ ಬಿಜೆಪಿಯವರು ಸಹಿಸದೆ ಪರಮೇಶ್ವರ ಅವರ ಮೇಲೆ ಪದೇ ಪದೇ ಇಡಿ ದಾಳಿ ಮಾಡಿಸುತ್ತಿರುವುದೇಕೆ? ಎಂದು ಪ್ರಶ್ನಿಸಿದರು.

‘ಸ್ವಪಕ್ಷ ಬಿಜೆಪಿಯವರ ಮೇಲೆ ಇಲ್ಲಿಯ ತನಕ ಒಮ್ಮೆಯೂ ಇಡಿ ದಾಳಿ ಆಗಿಲ್ಲ. ಆದರೆ ಕಾಂಗ್ರೆಸ್ಸಿಗರನ್ನೇ ಗುರಿಯಾಗಿಸಿಕೊಂಡು ಮಾಡಿ ದಾಳಿ ನಡೆಸುತ್ತಿರುವುದೇಕೆ. ಇದಕ್ಕೆ ಕೇಂದ್ರದ ಬಿಜೆಪಿ ನಾಯಕರೇ ಉತ್ತರ ನೀಡಬೇಕು’ ಎಂದು ಒತ್ತಾಯಿಸಿದರು.

‘ಡಾ.ಬಿ.ಆರ್.ಅಂಬೇಡ್ಕರ್ ಸಂವಿಧಾನದಲ್ಲಿ ಎಲ್ಲರಿಗೂ ಸಮಾನ ಶಿಕ್ಷಣ, ಹಕ್ಕುಗಳ ನೀಡಿರುವುದರಿಂದ ದಲಿತರು, ಹಿಂದುಳಿದ ವರ್ಗದವರು ಶಿಕ್ಷಣ ಪಡೆದು ರಾಜಕಾರಣ, ಶಿಕ್ಷಣ ಸಂಸ್ಥೆಗಳು, ಉದ್ದಿಮೆಗಳನ್ನು ಆರಂಭಿಸಿ ಮುಂಚೂಣಿಗೆ ಬರುತ್ತಿದ್ದಾರೆ.
ಇದನ್ನು ಸಹಿಸದ ಕೇಂದ್ರವು ಡಾ.ಜಿ.ಪರಮೇಶ್ವರ ಒಡೆತನ ಸಂಸ್ಥೆಗಳ ಮೇಲೆ ಇಡಿ ದಾಳಿ ನಡೆಸಿ ಅವರನ್ನು ಕುಗ್ಗಿಸುವ ಕೆಲಸಕ್ಕೆ ಮುಂದಾಗಿದೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.