ಬುಧವಾರ, ಸೆಪ್ಟೆಂಬರ್ 22, 2021
28 °C

ಮುಖ್ಯಮಂತ್ರಿ ಬದಲಾವಣೆ ವರಿಷ್ಠರ ನಿರ್ಧಾರಕ್ಕೆ ಬಿಟ್ಟಿದ್ದು: ಸುರೇಶ್‌ ಕುಮಾರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ‘ಪಕ್ಷದ ವರಿಷ್ಠರು ಹೇಳಿದಂತೆ ನಡೆದುಕೊಳ್ಳುತ್ತೇನೆ ಎಂದು ಯಡಿಯೂರಪ್ಪ ಅವರು ಹೇಳಿದ್ದಾರೆ. ಕೇಂದ್ರದ ನಾಯಕರು ರಾಜ್ಯದ ಬಗ್ಗೆ ಯೋಚನೆ ಮಾಡಿ, ಪರಾಮರ್ಶೆ ಮಾಡಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಸುರೇಶ್‌ ಕುಮಾರ್‌ ಅವರು ಹೇಳಿದರು. 

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದಲ್ಲಿ ಪಕ್ಷ ಕಟ್ಟುವುದರಲ್ಲಿ ಯಡಿಯೂರಪ್ಪ ಅವರ ಪಾತ್ರ ಅಪಾರ. ಬಹಳ ವರ್ಷಗಳಿಂದ ಅವರನ್ನು ನೋಡಿದ್ದೇನೆ. ರೈತ ನಾಯಕರಾಗಿ ಹಲವು ಚಳವಳಿ, ಪಾದಯಾತ್ರೆಗಳನ್ನು ಮಾಡಿದ್ದಾರೆ. ಪಕ್ಷದಲ್ಲಿ ಅವರಿಗಿರುವ ಸ್ಥಾನ, ಅವರ ಮೇಲಿನ ಗೌರವವನ್ನು ಯಾವತ್ತಿಗೂ ಮರೆಯುವುದಕ್ಕಾಗುವುದಿಲ್ಲ. ಕೇಂದ್ರ ನಾಯಕರೊಂದಿಗೆ ಅವರು ಮಾತನಾಡಿದ್ದಾರೆ. ಅದರ ಫಲಶ್ರುತಿ ಗೊತ್ತಾಗಬೇಕಿದೆ’ ಎಂದರು. 

ಮುಖ್ಯಮಂತ್ರಿ ಬದಲಾವಣೆ ಖಚಿತವೇ ಎಂಬ ಪ್ರಶ್ನೆಗೆ, ‘ಮುಂದೆ ಏನಾಗುತ್ತದೆ ಎಂಬುದನ್ನು ನೋಡೋಣ. ಸದ್ಯಕ್ಕೆ ಏನೂ ಗೊತ್ತಿಲ್ಲ. ಮುಂದಿನ ಬದಲಾವಣೆ ಆದಾಗ ಬೆಳವಣಿಗೆ ಆಧಾರದಲ್ಲಿ ನೋಡೋಣ’ ಎಂದರು. 

‘ನಾಯಕತ್ವ ಬದಲಾವಣೆ ಬಗ್ಗೆ ಪಕ್ಷದಲ್ಲಿ ಚರ್ಚೆ ನಡೆದಿಲ್ಲ. ನಮ್ಮ ಗಮನ ಏನಿದ್ದರೂ ಕೋವಿಡ್‌ ನಿಯಂತ್ರಣ, ಪ್ರವಾಹ ಪರಿಸ್ಥಿತಿಯ ಬಗ್ಗೆ ಇತ್ತು. ನಾಯಕತ್ವದ ವಿಚಾರಕ್ಕೆ ಸಂಬಂಧಿಸಿದಂತೆ ಹೈಕಮಾಂಡ್‌ ಅಭಿಪ್ರಾಯ ಸಂಗ್ರಹಿಸಿರಬಹುದು. ಆದರೆ ನನ್ನಲ್ಲಿ ಕೇಳಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಸುರೇಶ್‌ ಕುಮಾರ್ ಉತ್ತರಿಸಿದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು