ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಂದು ಅವಧಿಯ ಶುಲ್ಕ ಮಾತ್ರ ಪಡೆಯಲು ಸೂಚನೆ: ಸಚಿವ ಎಸ್‌.ಸುರೇಶ್‌ಕುಮಾರ್‌

ಸೆ. 30ರೊಳಗೆ ದಾಖಲಾತಿ ಪ್ರಕ್ರಿಯೆ ಪೂರ್ಣಗೊಳಿಸಲು ಸರ್ಕಾರಿ, ಖಾಸಗಿ ಶಾಲೆಗಳಿಗೆ ಸೂಚನೆ–ಸುರೇಶ್‌ ಕುಮಾರ್‌
Last Updated 7 ಸೆಪ್ಟೆಂಬರ್ 2020, 11:49 IST
ಅಕ್ಷರ ಗಾತ್ರ

ಚಾಮರಾಜನಗರ: ಒಂದು ಅವಧಿಯ (ಟರ್ಮ್‌) ಪ್ರವೇಶ ಶುಲ್ಕವನ್ನು ಮಾತ್ರ ವಿದ್ಯಾರ್ಥಿಗಳಿಂದ ಪಡೆಯಬೇಕು ಎಂದು ಖಾಸಗಿ ಶಾಲೆಗಳಿಗೆ ಸೂಚಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ಕುಮಾರ್‌ ಅವರು ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜೂನ್‌ನಿಂದ ಶಾಲೆಗಳು ಆರಂಭವಾಗಿಲ್ಲ. ಅನೇಕ ಖಾಸಗಿ ಶಾಲೆ‌ಗಳ ಶಿಕ್ಷಕರು ಕಷ್ಟದಲ್ಲಿದ್ದಾರೆ. ಹೀಗಾಗಿ, ಮಕ್ಕಳ ದಾಖಲಾತಿಗೆ ಅನುಮತಿ ನೀಡಿ, ಒಂದು ಅವಧಿಯ ಅಧಿಕೃತ ಶುಲ್ಕವನ್ನು ಮಾತ್ರ ಪಡೆಯುವಂತೆ ಸೂಚಿಸಿದ್ದೇವೆ. ಸಂಗ್ರಹಿಸಿದ ಶುಲ್ಕವನ್ನು ಶಿಕ್ಷಕರ ವೇತನಕ್ಕೆ ಪಾವತಿಸಲು ಬಳಸುವಂತೆ ತಿಳಿಸಲಾಗಿದೆ. ಹೆಚ್ಚಿನ ಶುಲ್ಕ ಪಡೆದರೆ, ಅಂತಹ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.

ಸೆಪ್ಟೆಂಬರ್‌ 30ರೊಳಗೆ ದಾಖಲಾತಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವಂತೆ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT