ಭಾನುವಾರ, ಜನವರಿ 24, 2021
17 °C

ಶುಲ್ಕ ವಿಚಾರ: ಖಾಸಗಿ ಶಾಲೆಗಳೊಂದಿಗೆ ಮಾತುಕತೆ- ಸುರೇಶ್‌ ಕುಮಾರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಹದೇಶ್ವರ ಬೆಟ್ಟ (ಚಾಮರಾಜನಗರ): ಪೋಷಕರು ಶುಲ್ಕ ಪಾವತಿಸದಿದ್ದರೆ ಆನ್‌ಲೈನ್‌ ತರಗತಿಗಳನ್ನು ಸ್ಥಗಿತಗೊಳಿಸುವುದಾಗಿ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳು ಎಚ್ಚರಿಸಿದ ಬೆನ್ನಲ್ಲೇ, ಈ ವಿಚಾರವಾಗಿ ಖಾಸಗಿ ಶಾಲೆಗಳ ಮುಖ್ಯಸ್ಥರ ಜೊತೆ ಶೀಘ್ರದಲ್ಲಿ ಸಭೆ ನಡೆಸುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ಅವರು ಹೇಳಿದ್ದಾರೆ. 

ಮಹದೇಶ್ವರ ಬೆಟ್ಟದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೋವಿಡ್‌ ಕಾರಣದಿಂದ ಕೆಲವು ಪೋಷಕರು ಶಾಲಾ ಶುಲ್ಕ ಪಾವತಿಸುವ ಸ್ಥಿತಿಯಲ್ಲಿ ಇಲ್ಲ. ಹಣ ಇದ್ದವರೂ ಕಟ್ಟುತ್ತಿಲ್ಲ. ಒಂದು ವೇಳೆ ಪೋಷಕರು ಶುಲ್ಕ ಪಾವತಿಸದಿದ್ದರೂ, ಮಕ್ಕಳನ್ನು ಮುಂದಿನ ತರಗತಿಗೆ ತೇರ್ಗಡೆ ಮಾಡಬೇಕು ಎಂದು ಹೇಳಿದ್ದೆ. ಇದನ್ನು ಅವರು ಯಾವ ರೀತಿ ಅರ್ಥೈಸಿಕೊಂಡಿದ್ದಾರೋ ಗೊತ್ತಿಲ್ಲ. ಬೆಂಗಳೂರಿಗೆ ತೆರಳಿದ ನಂತರ ಪೋಷಕರಿಗೆ ಹಾಗೂ ಖಾಸಗಿ ಶಾಲೆಗಳಿಗೆ ತೊಂದರೆಯಾಗದಂತೆ ಹಿತಕರ ಕ್ರಮ ಕೈಗೊಳ್ಳುತ್ತೇನೆ’ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು