ಶನಿವಾರ, ಮೇ 21, 2022
19 °C

846 ಪ್ರಕರಣ, 158 ಮಂದಿ ಗುಣಮುಖ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: ಜಿಲ್ಲೆಯಲ್ಲಿ ಬುಧವಾರ 2,664 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, 846 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಪೈಕಿ 132 ಮಕ್ಕಳು.

158 ಮಂದಿ ಗುಣಮುಖರಾಗಿದ್ದಾರೆ. ಸಾವಿನ ಪ್ರಕರಣ ವರದಿಯಾಗಿಲ್ಲ. ಸಕ್ರಿಯ ಪ್ರಕರಣಗಳ ಸಂಖ್ಯೆ 4000 ದಾಟಿದೆ (4050). 

ಸೋಂಕಿತರ ಪೈಕಿ 3,005 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. ಮೂವರು ಐಸಿಯುನಲ್ಲಿದ್ದಾರೆ. 

ಬುಧವಾರ ಸೋಂಕು ಖಚಿತವಾದ ವ್ಯಕ್ತಿಗಳ ಪೈಕಿ 565 ಮಂದಿಯನ್ನು ಹೋಂ ಐಸೊಲೇಷನ್‌ಗೆ ಕಳುಹಿಸಲಾಗಿದೆ. 

ತಾಲ್ಲೂಕುವಾರು: ಚಾಮರಾಜನಗರ ತಾಲ್ಲೂಕಿನಲ್ಲಿ ಅತಿ ಹೆಚ್ಚು 341 ಪ್ರಕರಣಗಳು ವರದಿಯಾಗಿವೆ. ಗುಂಡ್ಲುಪೇಟೆಯಲ್ಲಿ 226, ಕೊಳ್ಳೇಗಾಲದಲ್ಲಿ 117, ಹನೂರಿನಲ್ಲಿ 99 ಹಾಗೂ ಯಳಂದೂರು ತಾಲ್ಲೂಕಿನಲ್ಲಿ 62 ಪ್ರಕರಣಗಳು ದೃಢಪಟ್ಟಿವೆ. ಒಂದು ಪ್ರಕರಣ ಹೊರ ಜಿಲ್ಲೆಗೆ ಸೇರಿದೆ. 

ಬುಧವಾರ ಗುಣಮುಖರಾದ 158 ಮಂದಿಯಲ್ಲಿ 13 ಮಂದಿ ಮಕ್ಕಳಿದ್ದಾರೆ.

ಚಾಮರಾಜನಗರ ತಾಲ್ಲೂಕಿನಲ್ಲಿ 47 ಮಂದಿ, ಕೊಳ್ಳೇಗಾಲದಲ್ಲಿ 46, ಹನೂರು ತಾಲ್ಲೂಕಿನಲ್ಲಿ 30, ಗುಂಡ್ಲುಪೇಟೆಯಲ್ಲಿ 25, ಯಳಂದೂರು ತಾಲ್ಲೂಕಿನಲ್ಲಿ ಇಬ್ಬರು ಹಾಗೂ ಹೊರ ಜಿಲ್ಲೆಯ ಎಂಟು ಮಂದಿ ಸೋಂಕು ಮುಕ್ತರಾಗಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು