ಚಾಮರಾಜನಗರ: 18 ಮಂದಿಗೆ ಸೋಂಕು, 9 ಮಂದಿ ಗುಣಮುಖ

ಚಾಮರಾಜನಗರ: ಜಿಲ್ಲೆಯಲ್ಲಿ ಶನಿವಾರ ಮತ್ತೆ 18 ಮಂದಿಗೆ ಕೋವಿಡ್–19 ಇರುವುದು ದೃಢಪಟ್ಟಿದೆ. ಒಂಬತ್ತು ಮಂದಿ ಗುಣಮುಖರಾಗಿದ್ದಾರೆ.
ಕೋವಿಡ್ ಪ್ರಕರಣಗಳು ಹೆಚ್ಚಿರುವುದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 95ಕ್ಕೆ ಏರಿದೆ. ಈ ಪೈಕಿ 31 ಮಂದಿ ಹೋಂ ಐಸೊಲೇಷನ್ನಲ್ಲಿದ್ದಾರೆ. 12 ಮಂದಿ ಐಸಿಯುನಲ್ಲಿದ್ದಾರೆ.
ಶನಿವಾರದ ಅಂಕಿ ಅಂಶಗಳೊಂದಿಗೆ ಜಿಲ್ಲೆಯಲ್ಲಿ ಇದುವರೆಗೆ ದೃಢಪಟ್ಟ ಪ್ರಕರಣಗಳ ಸಂಖ್ಯೆ 6,415ಕ್ಕೆ ತಲುಪಿದೆ. 6,192 ಮಂದಿ ಗುಣಮುಖರಾಗಿದ್ದಾರೆ. 108 ಮಂದಿ ಕೋವಿಡ್ನಿಂದ ಮೃತಪಟ್ಟಿದ್ದಾರೆ. 20 ಮಂದಿ ಇತರ ಅನಾರೋಗ್ಯಗಳಿಂದಾಗಿ ಕೊನೆಯುಸಿರೆಳೆದಿದ್ದಾರೆ.
ಶನಿವಾರ 1,113 ಮಂದಿಯ ಕೋವಿಡ್ ಪರೀಕ್ಷಾ ವರದಿ ಬಂದಿದ್ದು, 1096 ಮಂದಿಯ ವರದಿ ನೆಗೆಟಿವ್ ಬಂದಿವೆ. 17 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ. ಒಂದು ಪ್ರಕರಣ ಮೈಸೂರಿನಲ್ಲಿ ದೃಢಪಟ್ಟಿದೆ.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.