ಚಾಮರಾಜನಗರ: 18 ಮಂದಿಗೆ ಕೋವಿಡ್ ದೃಢ

ಚಾಮರಾಜನಗರ: ಜಿಲ್ಲೆಯಲ್ಲಿ ಶುಕ್ರವಾರ 18 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಏಳು ಮಂದಿ ಗುಣಮುಖರಾಗಿದ್ದಾರೆ. ಸಾವು ಸಂಭವಿಸಿಲ್ಲ.
ಸದ್ಯ 86 ಸಕ್ರಿಯ ಪ್ರಕರಣಗಳಿವೆ. 36 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದು, 12 ಮಂದಿ ಐಸಿಯುನಲ್ಲಿದ್ದಾರೆ. ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 6,397ಕ್ಕೆ ಏರಿದ್ದು, 6,183 ಮಂದಿ ಗುಣಮುಖರಾಗಿದ್ದಾರೆ.
664 ಮಂದಿಯ ಗಂಟಲು ದ್ರವ ಮಾದರಿಗಳ ಪರೀಕ್ಷಾ ವರದಿ ಶುಕ್ರವಾರ ಬಂದಿದ್ದು, 17 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ. 647 ಮಂದಿಯ ವರದಿ ನೆಗೆಟಿವ್ ಬಂದಿವೆ. ಒಂದು ಪ್ರಕರಣ ಮೈಸೂರಿನಲ್ಲಿ ದೃಢಪಟ್ಟಿದೆ.
ಖಚಿತವಾಗಿರುವ 18 ಪ್ರಕರಣಗಳಲ್ಲಿ ಚಾಮರಾಜನಗರ ತಾಲ್ಲೂಕಿನ ಎಂಟು, ಗುಂಡ್ಲುಪೇಟೆ ಮತ್ತು ಕೊಳ್ಳೇಗಾಲದ ತಲಾ ನಾಲ್ಕು, ಹನೂರು ಮತ್ತು ಯಳಂದೂರು ತಾಲ್ಲೂಕುಗಳ ತಲಾ ಒಂದು ಪ್ರಕರಣ ಸೇರಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.