ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಆರ್‌ಟಿ: 6 ತಿಂಗಳಲ್ಲಿ 8ನೇ ಚಿರತೆ ಸೆರೆ

Last Updated 15 ಜನವರಿ 2022, 16:45 IST
ಅಕ್ಷರ ಗಾತ್ರ

ಚಾಮರಾಜನಗರ: ತಾಲ್ಲೂಕಿನ ವೀರನಪುರ ಗ್ರಾಮದಲ್ಲಿ ಬೋನಿಗೆ ಶನಿವಾರ ಮತ್ತೊಂದು ಹೆಣ್ಣು ಚಿರತೆ ಬಿದ್ದಿದ್ದು, ಬಿಆರ್‌ಟಿಯ ಸಿಬ್ಬಂದಿ ಅರಣ್ಯಕ್ಕೆ ಬಿಟ್ಟಿದ್ದಾರೆ.

ಆರು ತಿಂಗಳ ಅವಧಿಯಲ್ಲಿ ಅಧಿಕಾರಿಗಳು ಸೆರೆ ಹಿಡಿದು ಕಾಡಿಗೆ ಬಿಟ್ಟ ಎಂಟನೇ ಚಿರತೆ ಇದಾಗಿದೆ. ಐದು ದಿನಗಳ ಹಿಂದೆ ಇದೇ ಗ್ರಾಮದಲ್ಲಿ ಗಂಡು ಚಿರತೆಯೊಂದು ಬೋನಿಗೆ ಬಿದ್ದಿತ್ತು. ಸಿಬ್ಬಂದಿ ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದರು.

‘ಮೂರು ತಿಂಗಳ ಅವಧಿಯಲ್ಲಿ ಜಾನುವಾರುಗಳ ಮೇಲೆ ದಾಳಿ ಮಾಡಿದ ಪ್ರಕರಣ ವರದಿಯಾಗಿಲ್ಲ’ ಎಂದು ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ್‌ಕುಮಾರ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT