ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾ.ಪಂ. ಚುನಾವಣೆ ಎರಡನೇ ಹಂತ: 84 ನಾಮಪತ್ರ ತಿರಸ್ಕೃತ

Last Updated 18 ಡಿಸೆಂಬರ್ 2020, 13:27 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಎರಡನೇ ಹಂತದಲ್ಲಿ ನಡೆಯಲಿರುವ ಗ್ರಾಮ ಪಂಚಾಯಿತಿ ಚುನಾವಣೆಗೆ ಸಲ್ಲಿಸಲಾಗಿರುವ ನಾಮಪತ್ರಗಳ ಪರಿಶೀಲನೆ ಗುರುವಾರ ನಡೆದಿದ್ದು, 84 ನಾಮಪತ್ರಗಳು ತಿರಸ್ಕೃತಗೊಂಡಿವೆ.3,001 ಅಭ್ಯರ್ಥಿಗಳ ನಾಮ ಪತ್ರಗಳು ಕ್ರಮಬದ್ಧವಾಗಿವೆ.

ಯಳಂದೂರು ತಾಲ್ಲೂಕಿನಲ್ಲಿ 12 ಗ್ರಾಮ ಪಂಚಾಯಿತಿಗಳಿಗೆ 582 ನಾಮಪತ್ರಗಳು ಸ್ವೀಕೃತವಾಗಿದ್ದವು. ಈ ಪೈಕಿ 14 ನಾಮಪತ್ರಗಳು ತಿರಸ್ಕೃತಗೊಂಡಿದ್ದು, 558 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ.

ಕೊಳ್ಳೇಗಾಲ ತಾಲ್ಲೂಕಿನ 16 ಗ್ರಾಮ ಪಂಚಾಯತಿಗಳಿಗೆ 1,012 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಈ ಪೈಕಿ 29 ನಾಮಪತ್ರಗಳು ತಿರಸ್ಕೃತಗೊಂಡು 953 ಅಭ್ಯರ್ಥಿಗಳ ನಾಮಪತ್ರಗಳು ಸರಿಯಾಗಿವೆ.

ಹನೂರು ತಾಲ್ಲೂಕಿನ 24 ಗ್ರಾಮ ಪಂಚಾಯಿತಿಗಳಿಗೆ 1,531 ಉಮೇದುವಾರಿಕೆ ಸಲ್ಲಿಕೆಯಾಗಿದ್ದವು. ಈ ಪೈಕಿ 41 ನಾಮಪತ್ರಗಳು ತಿರಸ್ಕೃತವಾಗಿದ್ದು, 1,490 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ.

ನಾಮಪತ್ರ ವಾಪಸ್ಸಿಗೆ ಶನಿವಾರ (ಡಿ.19) ಕೊನೆಯ ದಿನವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT