ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: 89 ಹೊಸ ಪ್ರಕರಣ, 77 ಮಂದಿ ಗುಣಮುಖ

Last Updated 23 ಜೂನ್ 2021, 16:55 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಬುಧವಾರ 89 ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿವೆ. 77 ಮಂದಿ ಗುಣಮುಖರಾಗಿದ್ದಾರೆ. ಮೂವರು ಮೃತಪಟ್ಟಿದ್ದಾರೆ. ಈ ಪೈಕಿ ಇಬ್ಬರು ಕೋವಿಡ್‌ಯೇತರ ಕಾರಣಗಳಿಂದ ನಿಧನರಾಗಿದ್ದಾರೆ ಎಂದು ಕೋವಿಡ್‌ ಆಸ್ಪತ್ರೆ ವರದಿಯಲ್ಲಿ ಹೇಳಿದೆ.

ಪ್ರಕರಣಗಳ ಸಂಖ್ಯೆ ಹೆಚ್ಚಿರುವುದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡು ಬಂದಿದೆ. ಜಿಲ್ಲೆಯಲ್ಲಿ ಸದ್ಯ 783 ಸೋಂಕಿತರಿದ್ದಾರೆ. ಈ ಪೈಕಿ 46 ಜನರು ಐಸಿಯುನಲ್ಲಿ ಹಾಗೂ 16 ಜನರು ಹೋಂ ಐಸೊಲೇಷನ್‌ನಲ್ಲಿದ್ದಾರೆ.

ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 30,406ಕ್ಕೆ ಏರಿದೆ. 29,133 ಮಂದಿ ಗುಣಮುಖರಾಗಿದ್ದಾರೆ.

ಬುಧವಾರ 2,342 ಮಂದಿಯ ಗಂಟಲು ದ್ರವ ಮಾದರಿಗಳ ಪರೀಕ್ಷಾ ವರದಿ ಬಂದಿದ್ದು, 2,239 ಮಂದಿಯ ವರದಿ ನೆಗೆಟಿವ್‌ ಬಂದಿವೆ. 103 ಮಂದಿಗೆ ಸೋಂಕು ತಗುಲಿರುವುದು ಖಚಿತವಾಗಿದೆ. ಆದರೆ, ಜಿಲ್ಲಾಡಳಿತ ತನ್ನ ವರದಿಯಲ್ಲಿ 89 ಪ್ರಕರಣಗಳ ಲೆಕ್ಕ ತೋರಿಸಿದೆ. ಉಳಿದ ಪ್ರಕರಣಗಳ ಬಗ್ಗೆ ಮಾಹಿತಿ ನೀಡಿಲ್ಲ.

89 ಸೋಂಕಿತರ ಪೈಕಿ ಚಾಮರಾಜನಗರ ತಾಲ್ಲೂಕಿನ 50, ಗುಂಡ್ಲುಪೇಟೆಯ 18, ಕೊಳ್ಳೇಗಾಲದ ಐದು, ಹನೂರಿನ 13 ಹಾಗೂ ಯಳಂದೂರು ತಾಲ್ಲೂಕಿನ ಮೂವರು ಇದ್ದಾರೆ.

ಕೋವಿಡ್‌ ಆಸ್ಪತ್ರೆಗಳಲ್ಲಿದ್ದ 16 ಮಂದಿ, ಕೇರ್ ಕೇಂದ್ರಗಳಲ್ಲಿದ್ದ 55 ಹಾಗೂ ಮನೆಯಲ್ಲೇ ಆರೈಕೆ ಪಡೆಯುತ್ತಿದ್ದ ಆರು ಮಂದಿ ಗುಣಮುಖರಾಗಿದ್ದಾರೆ. ಇವರಲ್ಲಿಚಾಮರಾಜನಗರ ತಾಲ್ಲೂಕಿನ 36, ಗುಂಡ್ಲುಪೇಟೆಯ 19, ಕೊಳ್ಳೇಗಾಲದ ಆರು, ಹನೂರಿನ 11 ಹಾಗೂ ಯಳಂದೂರು ತಾಲ್ಲೂಕಿನ ಮೂವರು ಹಾಗೂ ಹೊರ ಜಿಲ್ಲೆಯ ಇಬ್ಬರು ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT