ಚಾಮರಾಜನಗರ: ಜಿಲ್ಲೆಯಲ್ಲಿ ಗುರುವಾರ 114 ಮಂದಿ ಕೋವಿಡ್ನಿಂದ ಗುಣಮುಖರಾಗಿದ್ದಾರೆ. 83 ಮಂದಿಗೆ ಸೋಂಕು ತಗುಲಿದೆ. ಒಬ್ಬರು ಮೃತಪಟ್ಟಿದ್ದಾರೆ.

ಮಹದೇಶ್ವರ ಬೆಟ್ಟದ ನಿವಾಸಿ 60 ವರ್ಷದ ಮಹಿಳೆ ಅ.6ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಮರುದಿನ ಮೃತಪಟ್ಟಿದ್ದಾರೆ. ಈವರೆಗೆ ಕೋವಿಡ್ನಿಂದಾಗಿ 73 ಮಂದಿ ಮೃತಪಟ್ಟಿದ್ದಾರೆ. ಬೇರೆ ಕಾರಣಗಳಿಂದ 28 ಮಂದಿ ಪ್ರಾಣಕಳೆದುಕೊಂಡಿದ್ದಾರೆ.

ಗುರುವಾರದ 114 ಮಂದಿ ಸೇರಿದಂತೆ ಜಿಲ್ಲೆಯಲ್ಲಿ 3,878 ಮಂದಿ ಸೋಂಕು ಮುಕ್ತರಾಗಿದ್ದಾರೆ. ಇದುವರೆಗೆ 4,730 ಮಂದಿ ಕೋವಿಡ್–19ಗೆ ತುತ್ತಾಗಿದ್ದಾರೆ. 750 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ, 269 ಮಂದಿ ಹೋಂ ಐಸೊಲೇಷನ್ನಲ್ಲಿದ್ದಾರೆ. 38 ಮಂದಿ ಐಸಿಯುನಲ್ಲಿದ್ದಾರೆ.

ಗುರುವಾರ 1,084 ಮಂದಿಯ ಗಂಟಲು ದ್ರವ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಆರ್ಟಿಪಿಸಿಆರ್ ವಿಧಾನದಲ್ಲಿ 660, ರ್ಯಾಪಿಡ್ ಆ್ಯಂಟಿಜೆನ್ ಕಿಟ್ ಮೂಲಕ 424 ಪರೀಕ್ಷೆಗಳನ್ನು ನಡೆಸಲಾಗಿದೆ. 1,007 ವರದಿಗಳು ನೆಗೆಟಿವ್ ಬಂದಿವೆ. 77 ಮಂದಿಗೆ ಸೋಂಕು ಖಚಿತವಾಗಿದೆ. ಉಳಿದ ಐದು ಪ್ರಕರಣಗಳು ಮೈಸೂರು ಹಾಗೂ ಒಂದು ಪ್ರಕರಣ ಬೆಂಗಳೂರಿನಲ್ಲಿ ದೃಢಪಟ್ಟಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.