ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹನೂರು |ಮನೆಯ ಗೋಡೆ ಕುಸಿದು ವೃದ್ಧೆ ಸಾವು: ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಶಾಸಕ

Published : 13 ಆಗಸ್ಟ್ 2024, 14:04 IST
Last Updated : 13 ಆಗಸ್ಟ್ 2024, 14:04 IST
ಫಾಲೋ ಮಾಡಿ
Comments

ಹನೂರು: ಸೋಮವಾರ ತಡರಾತ್ರಿ ಸುರಿದ ಮಳೆಗೆ ಸಮೀಪದ ಸಿಂಗನಲ್ಲೂರಿನಲ್ಲಿ ಮನೆಯ ಗೋಡೆ ಕುಸಿದು ವೃದ್ಧೆ ರಂಗಮ್ಮ (82) ಮೃತಪಟ್ಟ ಹಿನ್ನೆಲೆಯಲ್ಲಿ ಶಾಸಕ ಆರ್.ನರೇಂದ್ರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಸ್ಥಳದಲ್ಲಿಯೇ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರಿಗೆ ದೂರವಾಣಿಯ ಮೂಲಕ ಕರೆ ಮಾಡಿ ಮಾಹಿತಿ ಪಡೆದರು. ಸರ್ಕಾರದಿಂದ ಸೂಕ್ತ ಪರಿಹಾರ ದೊರಕಿಸುವಂತೆ ಸೂಚಿಸಿದರು. ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ, ಶೀಘ್ರವೇ ಪರಿಹಾರ ನೀಡಲಾಗುವುದು ಎಂದು ಭರವಸೆ ನೀಡಿದರು.

‘ಕಳೆದೆರಡು ದಿನಗಳಿಂದ ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಭಾರಿ ಮಳೆ ಆಗುತ್ತಿದೆ. ಹೀಗಾಗಿ ನಾಗರಿಕರು ಎಚ್ಚರದಿಂದ ಇರಬೇಕು’ ಎಂದು ಸಲಹೆ ನೀಡಿದರು.

ಸ್ಥಳಕ್ಕೆ ತಹಶೀಲ್ದಾರ್ ಮಂಜುಳಾ ಹಾಗೂ ಪಾಲಿಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಈ ಸಂಬಂಧ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT