ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹನೂರು | ಕಾಡಾನೆ ದಾಳಿ: ಮೂವರಿಗೆ ಗಾಯ

Published 21 ಜೂನ್ 2024, 16:21 IST
Last Updated 21 ಜೂನ್ 2024, 16:21 IST
ಅಕ್ಷರ ಗಾತ್ರ

ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಧಾಮದ ಪಿ.ಜಿ. ಪಾಳ್ಯ ವನ್ಯಜೀವಿ ವಲಯದಲ್ಲಿ ಗುರುವಾರ ರಾತ್ರಿ ಕಾಡಾನೆ ದಾಳಿಯಿಂದ ಆನೆ ಕಾರ್ಯಪಡೆಯ ಮೂವರು ಸಿಬ್ಬಂದಿ ಗಾಯಗೊಂಡಿದ್ದಾರೆ.

ಮುನಿಯಪ್ಪ, ನಾಗರಾಜು, ಜಡೇಸ್ವಾಮಿ ದಾಳಿಗೆ ಒಳಗಾದವರು. ಗುಂಡಿಮಾಳ ಗ್ರಾಮದ ಮುಖ್ಯ ರಸ್ತೆಯಲ್ಲಿ  ಗ್ರಾಮದೊಳಗೆ ಆನೆ ನುಗ್ಗುತ್ತಿರುವುದನ್ನು ಗಮನಿಸಿದ ಸಿಬ್ಬಂದಿ ತಡೆಯಲು ಮುಂದಾಗಿದ್ದಾರೆ. ಆಗ ಆನೆ ದಾಳಿ ನಡೆಸಿದ್ದು ಮುನಿಯಪ್ಪ ಅವರ ತಲೆ, ನಡುಭಾಗಕ್ಕೆ ಗಂಭೀರ ಪೆಟ್ಟಾಗಿದೆ. ನಾಗರಾಜು ಕೈಗೆ ಹಾಗೂ ಜಡೇಸ್ವಾಮಿ ಕಾಲಿಗೆ ಪೆಟ್ಟಾಗಿದೆ.

ಗಾಯಾಳುಗಳಿಗೆ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಾಣಕ್ಕೆ ಅಪಾಯವಿಲ್ಲ ಎಂದು ವಲಯ ಅರಣ್ಯಾಧಿಕಾರಿ ಶಿವರಾಮು ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT