ಗುಂಡ್ಲುಪೇಟೆ: ಪಟ್ಟಣದಿಂದ ಮನೆಗೆ ರಸ್ತೆಯಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಆನೆ ದಾಳಿಯಿಂದ ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ತಾಲ್ಲೂಕಿನ ಕಾಡಂಚಿನ ಗ್ರಾಮದ ಮಂಗಲ ಗ್ರಾಮದ ಬಂಗಾರಿ(45), ರತ್ನಮ್ಮ(55) ಗಾಯಾಳುಗಳು. ಗುಂಡ್ಲುಪೇಟೆ ಪಟ್ಟಣದಿಂದ ಮಂಗಲ ಗ್ರಾಮಕ್ಕೆ ತೆರಳುವ ಸಂದರ್ಭದಲ್ಲಿ ಶುಕ್ರವಾರ ಸಂಜೆ 7.30 ರ ಸಮಯದಲ್ಲಿ ಮಂಗಲ ರಸ್ತೆಯಲ್ಲಿ ಬೈಕಿನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ರಸ್ತೆಯ ಬದಿಯಲ್ಲಿ ಮರಿಯೊಂದಿಗೆ ಇದ್ದ ಆನೆ ಏಕಾಏಕಿ ದಾಳಿ ಮಾಡಿದೆ. ಈ ರಸ್ತೆಯಲ್ಲಿ ಸಂಚಾರ ಮಾಡುತ್ತಿದ್ದವರು ದಾಳಿಗೆ ಒಳಗಾದವರನ್ನು ಆನೆಯಿಂದ ರಕ್ಷಣೆ ಮಾಡಿದ್ದಾರೆ.

ಮಂಗಲ ಗ್ರಾಮಕ್ಕೆ ತೆರಳುವ ರಸ್ತೆಯ ಬದಿಯಲ್ಲಿ ಸಫಾರಿ ವಾಹನಗಳು ನಿಲ್ಲುವುದರಿಂದ ಮತ್ತು ರಸ್ತೆಯ ಬದಿಯಲ್ಲಿ ಕಳೆ ಗಿಡಗಳು ಬೆಳೆದು ನಿಂತಿರುವುದರಿಂದ ಆನೆಗಳು ಇರುವುದು ದ್ವಿಚಕ್ರ ವಾಹನ ಸವಾರರಿಗೆ ಗೊತ್ತಾಗುವುದಿಲ್ಲ. ಇದರಿಂದಾಗಿ ದಾಳಿ ಹೆಚ್ಚಾಗುತ್ತಿದೆ. ಆದ್ದರಿಂದ ಕಾಡಿನಲ್ಲಿರುವ ರಸ್ತೆ ಬದಿಯಲ್ಲಿ ಬೆಳೆದು ನಿಂತಿರುವ ಕಳೆ ಗಿಡಗಳನ್ನು ತೆರವು ಮಾಡಬೇಕು ಎಂದು ಮಂಗಲ ಗ್ರಾಮದ ಉಮೇಶ್ ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.