ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಆರ್‌ಟಿ ಅರಣ್ಯದಲ್ಲಿ ಹೆಣ್ಣಾನೆ ಸಾವು

Last Updated 28 ಆಗಸ್ಟ್ 2020, 16:54 IST
ಅಕ್ಷರ ಗಾತ್ರ

ಚಾಮರಾಜನಗರ: ಬಿಳಿಗಿರಿ ರಂಗನಾಥಸ್ವಾಮಿ ದೇವಾಲಯ (ಬಿಆರ್‌ಟಿ) ಹುಲಿ ಸಂರಕ್ಷಿತ ಪ‍್ರದೇಶದ ಪುಣಜನೂರು ವಲಯದ ಅರಣ್ಯ ವ್ಯಾಪ್ತಿಯ ಯತ್ತೇಗೌಡನದೊಡ್ಡಿಯಲ್ಲಿ ಹೆಣ್ಣಾನೆಯೊಂದರ ಮೃತದೇಹ ಗುರುವಾರ ಪತ್ತೆಯಾಗಿದೆ.

ಆನೆಗೆ 50 ವರ್ಷ ಆಗಿರಬಹುದು ಎಂದು ಅಂದಾಜಿಸಲಾಗಿದೆ. ಇದು ಸಹಜ ಸಾವು ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

‘ವಯಸ್ಸಿನ ಕಾರಣದಿಂದ ಆನೆ ಸಹಜವಾಗಿಯೇ ಮೃತಪ‍ಟ್ಟಿದೆ ಎಂದು ಮರಣೋತ್ತರ ಪರೀಕ್ಷೆಯಲ್ಲಿ ತಿಳಿದು ಬಂದಿದೆ’ ಎಂದು ವಲಯ ಅರಣ್ಯಾಧಿಕಾರಿ ಕಾಂತರಾಜು ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

ಮರಣೋತ್ತರ ಪರೀಕ್ಷೆಯ ನಂತರ ಅದೇ ಸ್ಥಳದಲ್ಲಿ ಸುಡಲಾಯಿತು.

ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ್‌ಕುಮಾರ್‌, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರಮೇಶ್‌, ವಲಯ ಅರಣ್ಯ ಅಧಿಕಾರಿ ಕಾಂತರಾಜು ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT