ಭಾನುವಾರ, ಅಕ್ಟೋಬರ್ 25, 2020
27 °C

ಮಲೆ ಮಹದೇಶ್ವರ ವನ್ಯಧಾಮದಲ್ಲಿ ವಿದ್ಯುತ್ ಸ್ಪರ್ಶಿಸಿ ಗಂಡಾನೆ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹನೂರು (ಚಾಮರಾಜನಗರ): ಮಲೆ ಮಹದೇಶ್ವರ ವನ್ಯಧಾಮದ ಪಿ.ಜಿ.ಪಾಳ್ಯ ವಲಯದಲ್ಲಿ ವಿದ್ಯುತ್ ಪ್ರವಹಿಸುತ್ತಿದ್ದ ತಂತಿ ಬೇಲಿಯನ್ನು ಸ್ಪರ್ಶಿಸಿ ಗಂಡಾನೆಯೊಂದು ಮೃತಪಟ್ಟಿದೆ.

ಪಿ.ಜಿ.ಪಾಳ್ಯದ ಸಿರಿಗೋಡು ಹತ್ತಿರದ ಕೃಷಿ ಜಮೀನೊಂದರಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದೆ‌. ಮೃತ ಪಟ್ಟಿರುವ ಆನೆಯ ವಯಸ್ಸು 28-30 ವರ್ಷ ಇರಬಹುದು ಎಂದು ಅರಣ್ಯಾಧಿಕಾರಿಗಳು ಅಂದಾಜಿಸಿದ್ದಾರೆ.

ಬೆಳೆ ರಕ್ಷಣೆಗಾಗಿ ರೈತರೊಬ್ಬರು ತಮ್ಮ‌ ಜಮೀನಿಗೆ ತಂತಿಬೇಲಿ ಅಳವಡಿಸಿದ್ದರು. ಅದಕ್ಕೆ ಅಕ್ರಮವಾಗಿ ವಿದ್ಯುತ್ ಸಂಪರ್ಕವನ್ನೂ‌ ನೀಡಲಾಗಿತ್ತು ಎಂದು ಗೊತ್ತಾಗಿದೆ.

ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ‌ ನೀಡಿ ಪರಿಶೀಲನೆ‌ ನಡೆಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು