ಮಂಗಳವಾರ, 10 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಆರ್‌ಟಿ | ನಾಲ್ಕು ದಿನ; 3 ಆನೆ ಕಳೇಬರ ಪತ್ತೆ: ಆತಂಕ ಮೂಡಿಸಿದ ಸರಣಿ ಆನೆಗಳ ಸಾವು

ವಾರದಲ್ಲಿ ಮೂರು ಆನೆಗಳ ಸಾವು
Published 31 ಆಗಸ್ಟ್ 2024, 22:30 IST
Last Updated 31 ಆಗಸ್ಟ್ 2024, 22:30 IST
ಅಕ್ಷರ ಗಾತ್ರ

ಹನೂರು: ಗಿರಿ ರಂಗನಾಥಸ್ವಾಮಿ ಹುಲಿ ಸಂರಕ್ಷಿತ ಅರಣ್ಯ ವ್ಯಾಪ್ತಿಯ ಬೈಲೂರು ವನ್ಯಜೀವಿ ವಲಯದಲ್ಲಿ ಮತ್ತೊಂದು ಆನೆಯ ಮೃತದೇಹ ಶನಿವಾರ ಪತ್ತೆಯಾಗಿದ್ದು, ಒಂದು ವಾರದ ಅವಧಿಯಲ್ಲಿ ಮೂರು ಆನೆಗಳು ಸಾವಿಗೀಡಾಗಿವೆ. ‌

ಬೈಲೂರು ಮತ್ತು ಯಳಂದೂರು ವ್ಯಾಪ್ತಿಯಲ್ಲಿ ಕೆಲವು ದಿನಗಳ ಹಿಂದೆ ಎರಡು ಆನೆಗಳ ಮೃತದೇಹಗಳು ಪತ್ತೆಯಾಗಿದ್ದವು. ಅರಣ್ಯ ಸಿಬ್ಬಂದಿ ಗಸ್ತು ಕಾರ್ಯಾಚರಣೆ ಚುರುಕುಗೊಳಿಸಿದಾಗ, ಮುಳ್ಳಿನ ಪೊದೆಯೊಳಗೆ 60 ರಿಂದ 65 ವರ್ಷ ವಯಸ್ಸಿನ ಹೆಣ್ಣಾನೆಯ ಕಳೇಬರ ಪತ್ತೆಯಾಗಿದೆ.

ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಆನೆಯ ಶವಪರೀಕ್ಷೆ ನಡೆಸಲಾಗಿದ್ದು, ‘ಏಳೆಂಟು ದಿನಗಳ ಹಿಂದೆ ಸ್ವಾಭಾವಿಕವಾಗಿ ಸಾವನ್ನಪ್ಪಿದೆ. ಈ ಮುಂಚೆ ಎರಡು ಆನೆಗಳೂ ಸ್ವಾಭಾವಿಕವಾಗಿ ಮೃತಪಟ್ಟಿವೆ’ ಎಂದು ಪಶುವೈದ್ಯಾಧಿಕಾರಿಗಳು ದೃಢಪಡಿಸಿದ್ದಾರೆ.

‘ವಾರದಲ್ಲಿ ಮೂರು ಆನೆಗಳ ಮೃತದೇಹ ಪತ್ತೆಯಾಗಿರುವುದು ಹಲವು ಅನುಮಾನಗಳಿಗೂ ಎಡೆಮಾಡಿಕೊಟ್ಟಿದೆ. ಸಾಂಕ್ರಾಮಿಕ ರೋಗ ಕಾಣಿಸಿಕೊಂಡಿದೆಯೇ ಅಥವಾ ಆನೆಗಳಿಗೆ ವಿಷ ಇಕ್ಕಲಾಗುತ್ತಿದೆಯೇ’ ಎಂಬ ಅನುಮಾನಗಳು ವ್ಯಕ್ತವಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT