ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಳ್ಳೇಗಾಲ: ಗಜಗಳ ಕಾಳಗ, ಒಂದು ಆನೆ ಸಾವು

Published 6 ಸೆಪ್ಟೆಂಬರ್ 2023, 22:32 IST
Last Updated 6 ಸೆಪ್ಟೆಂಬರ್ 2023, 22:32 IST
ಅಕ್ಷರ ಗಾತ್ರ

ಕೊಳ್ಳೇಗಾಲ: ತಾಲ್ಲೂಕಿನ ಜಾಗೇರಿ ಗ್ರಾಮದ ದೊಡ್ಡ ಮಾಕಳಿ ಅರಣ್ಯ ಪ್ರದೇಶದಲ್ಲಿ ಎರಡು ಗಂಡಾನೆಗಳ ನಡುವೆ ನಡೆದ ಕಾಳಗದಲ್ಲಿ ಒಂದು ಆನೆ ಮೃತಪಟ್ಟಿದೆ. 

ಮೃತಪಟ್ಟ ಆನೆಗೆ 18ರಿಂದ 20 ವರ್ಷವಾಗಿದ್ದು, ಎರಡು ದಿನಗಳ ಹಿಂದೆ ಈ ಘಟನೆ ನಡೆದಿರಬಹುದು ಎಂದು ಅಂದಾಜಿಸಲಾಗಿದೆ. 

ಎರಡು ಮೂರು ದಿನಗಳ ಹಿಂದೆ ಆನೆಗಳ ಕೂಗಾಟ ಹೆಚ್ಚಾಗಿತ್ತು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. 

‘ಮೃತಪಟ್ಟ ಆನೆಯ ಹೊಟ್ಟೆ ಮತ್ತು ಕತ್ತಿನ ಭಾಗಕ್ಕೆ ತೀವ್ರ ಗಾಯಗಳಾಗಿವೆ. ಇನ್ನೊಂದು ಆನೆಯು ದಂತದಿಂದ ತಿವಿದಿದೆ. ಆನೆಯು ತೀವ್ರ ರಕ್ತಸ್ರಾವದಿಂದ  ಮೃತಪಟ್ಟಿದೆ’ ಎಂದು ಪಶುವೈದ್ಯ ಶಿವಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ. ದೊಡ್ಡಮಾಕಳಿ ಅರಣ್ಯ ಪ್ರದೇಶದ ಸಿಬ್ಬಂದಿ ಬುಧವಾರ ಬೀಟ್‌ಗೆ ಹೋಗಿದ್ದ ಸಂದರ್ಭದಲ್ಲಿ ಆನೆ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.

ಮಲೆ ಮಹದೇಶ್ವರ ವನ್ಯಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ಜಿ.ಸಂತೋಷ್ ಕುಮಾರ್, ಎಸಿಎಫ್ ಶಶಿಧರ್, ಆರ್‌ಎಫ್‌ಒ ಭರತ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿನೆ ನಡೆಸಿದರು. ಆನೆಯ ದಂತವನ್ನು ತೆಗೆದು, ಮರಣೋತ್ತರ ಪರೀಕ್ಷೆ ನಡೆಸಿ, ನಿಯಮಾನುಸಾರ ಕಳೇಬರವನ್ನು ವಿಲೇವಾರಿ ಮಾಡಲಾಯಿತು ಎಂದು ಮೂಲಗಳು ತಿಳಿಸಿವೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT