ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕೇರಳ ಹೆದ್ದಾರಿಯಲ್ಲಿ ಮಂಗಳವಾರ ರಾತ್ರಿ ಲಾರಿ ಡಿಕ್ಕಿ ಹೊಡೆದು ಹೆಣ್ಣಾನೆ ಮೃತಪಟ್ಟಿರುವ ಪ್ರಕರಣ ಸಂಬಂಧ ಲಾರಿ ಚಾಲಕ ಹಾಗೂ ಕ್ಲೀನರ್ ಅನ್ನು ಬಂಧಿಸಲಾಗಿದೆ.
ಬಂಧಿತ ಚಾಲಕನ ಹೆಸರು ಅಯ್ಯಸ್ವಾಮಿ ಹಾಗೂ ಕ್ಲೀನರ್ ಆನಂದ್ ಎಂದು ಪೊಲೀಸರು ತಿಳಿಸಿದ್ದಾರೆ. ರಾತ್ರಿ 8.30ಕ್ಕೆ ಮದ್ದೂರು ವಲಯದಲ್ಲಿ ಘಟನೆ ನಡೆದಿದೆ. ಕೇರಳದಿಂದ ಗುಂಡ್ಲುಪೇಟೆಯತ್ತ ಬರುತ್ತಿದ್ದ ತಮಿಳುನಾಡು ನೋಂದಣಿ ಲಾರಿಯು ಹೆಣ್ಣಾನೆಗೆ ಡಿಕ್ಕಿ ಹೊಡೆದಿದೆ. ಆನೆಗೆ 25ರಿಂದ 30 ವರ್ಷ ವಯಸ್ಸಾಗಿದೆ ಎಂದು ಅಂದಾಜಿಸಲಾಗಿದೆ.
ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಈ ಹೆದ್ದಾರಿಯಲ್ಲಿ ವಾಹನ ಸಂಚಾರ ನಿಷೇಧವಿದೆ. ಕೊಯಮತ್ತೂರು ಮೂಲದ ಲಾರಿಯು ರಾತ್ರಿ 8 ಗಂಟೆಗೆ ಮೂಲೆಹೊಳೆ ಚೆಕ್ ಪೋಸ್ಟ್ ದಾಟಿದೆ. ಚಾಲಕ ವೇಗವಾಗಿ ವಾಹನ ಚಲಾಯಿಸುತ್ತಿದ್ದ ಎಂದು ಹೇಳಲಾಗುತ್ತಿದೆ.
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರಾತ್ರಿ ಸಂಚಾರ ನಿಷೇಧವನ್ನು ಸಂಜೆ 6 ಗಂಟೆಯಿಂದಲೇ ಮಾಡಬೇಕು ಎಂಬ ಕೂಗುಈಗಎದ್ದಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.