ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧುಮಲೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಪ್ಲಾಸ್ಟಿಕ್ ತಿಂದ ಆನೆ: ವಿಡಿಯೊ ವೈರಲ್

Last Updated 22 ಸೆಪ್ಟೆಂಬರ್ 2022, 11:48 IST
ಅಕ್ಷರ ಗಾತ್ರ

ಗುಂಡ್ಲುಪೇಟೆ: ಕಾಡಾನೆಯೊಂದು ಪ್ಲಾಸ್ಟಿಕ್ ತಿನ್ನುವ ವಿಡಿಯೊ ತುಣುಕು ಸಾಮಾಜಿಕ ಜಾಲ ತಾಣಗಳಲ್ಲಿ‌ ಹರಿದಾಡುತ್ತಿದೆ.

ಹೆದ್ದಾರಿ ಬದಿಯಲ್ಲಿ ಪ್ರವಾಸಿಗರು ಎಸೆದಿರುವ ಪ್ಲಾಸ್ಟಿಕ್ ಕವರ್ ಅನ್ನು ಆನೆ ಸೊಂಡಿಲಿನಲ್ಲಿ ಹಿಡಿದು ಬಾಯಿಗೆ ಹಾಕಿಕೊಳ್ಳುತ್ತಿರುವ ದೃಶ್ಯ ವಿಡಿಯೊದಲ್ಲಿದೆ.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಈ ಘಟನೆ ನಡೆದಿದೆ‌ ಎಂದು ಹೇಳಲಾಗುತ್ತಿದೆ. ಆದರೆ, ಬಂಡೀಪುರದ ವಿಡಿಯೊ‌ ಇದಲ್ಲ ಎಂದು ಅಧಿಕಾರಿಗಳು 'ಪ್ರಜಾವಾಣಿ'ಗೆ ಸ್ಪಷ್ಟಪಡಿಸಿದ್ದಾರೆ.

ದೃಶ್ಯವನ್ನು ಸೆರೆ ಹಿಡಿದವರು ತಮಿಳು‌ ಭಾಷೆಯಲ್ಲಿ ಮಾತನಾಡುವುದು ವಿಡಿಯೊದಲ್ಲಿ ಸ್ಪಷ್ಟವಾಗಿ ಕೇಳಿಸುತ್ತಿದೆ.

ಈ ಬಗ್ಗೆ 'ಪ್ರಜಾವಾಣಿ'ಗೆ ಪ್ರತಿಕ್ರಿಯಿಸಿದ ಬಂಡೀಪುರ ಹುಲಿಸಂರಕ್ಷಿತ ಪ್ರದೇಶದ ನಿರ್ದೇಶಕ ಡಾ.ರಮೇಶ್ ಕುಮಾರ್, 'ಎರಡು ದಿನಗಳ ಹಿಂದೆಯೇ ಈ ವಿಡಿಯೊ ನೋಡಿದ್ದೇನೆ. ಇದು ನಮ್ಮ ಬಂಡೀಪುರದ್ದಲ್ಲ. ನೆರೆಯ ಮಧುಮಲೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆದಿದೆ' ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT