ಚಾಮರಾಜನಗರ: 11 ಹೊಸ ಪ್ರಕರಣ ದೃಢ

ಚಾಮರಾಜನಗರ: ಜಿಲ್ಲೆಯಲ್ಲಿ ಶನಿವಾರ 11 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಒಂಬತ್ತು ಮಂದಿ ಗುಣಮುಖರಾಗಿದ್ದಾರೆ. ಸಾವು ಸಂಭವಿಸಿಲ್ಲ.
ಸದ್ಯ 77 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 50 ಮಂದಿ ಹೋಂ ಐಸೊಲೇಷನ್ನಲ್ಲಿದ್ದು, ಇಬ್ಬರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 6,782ಕ್ಕೆ ಏರಿಕೆಯಾಗಿದೆ. 6,574 ಮಂದಿ ಗುಣಮುಖರಾಗಿದ್ದಾರೆ. 111 ಮಂದಿ ಕೋವಿಡ್ನಿಂದ ಹಾಗೂ 20 ಮಂದಿ ಅನ್ಯ ಕಾರಣಗಳಿಂದ ಕೊನೆಯುಸಿರೆಳೆದಿದ್ದಾರೆ.
ಶನಿವಾರ 1,710 ಮಂದಿಯ ಕೋವಿಡ್ ಪರೀಕ್ಷಾ ವರದಿ ಬಂದಿದ್ದು, 1,710 ಮಂದಿಯ ವರದಿ ನೆಗೆಟಿವ್ ಬಂದಿವೆ. 10 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. ಒಂದು ಪ್ರಕರಣ ತಮಿಳುನಾಡಿನಲ್ಲಿ ಖಚಿತವಾಗಿದೆ.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.