ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಸಿಎಸ್ ಪಬ್ಲಿಕ್ ಶಾಲೆಯಲ್ಲಿ ಇಂಗ್ಲಿಷ್‌ ಹಬ್ಬದ ಕಲರವ

Published 18 ಫೆಬ್ರುವರಿ 2024, 5:42 IST
Last Updated 18 ಫೆಬ್ರುವರಿ 2024, 5:42 IST
ಅಕ್ಷರ ಗಾತ್ರ

ಚಾಮರಾಜನಗರ: ಇಂಗ್ಲಿಷ್ ನಾಟಕಕಾರ, ಕವಿ ವಿಲಿಯಂ ಷೇಕ್ಸ್‌ಪಿಯರ್‌ ಸ್ಮರಣೆ ಪ್ರಯುಕ್ತ ನಗರದ ಸೋಮವಾರಪೇಟೆಯ ಎಂಸಿಎಸ್ ಪಬ್ಲಿಕ್ ಶಾಲೆಯಲ್ಲಿ ಶನಿವಾರ ಆಯೋಜಿಸಲಾಗಿದ್ದ ಇಂಗ್ಲಿಷ್ ಹಬ್ಬದಲ್ಲಿ ವಿದ್ಯಾರ್ಥಿಗಳ ಕಲರವ, ಸಂಭ್ರಮ ಮನೆಮಾಡಿತ್ತು.

ಇಂಗ್ಲಿಷ್ ಹಬ್ಬದ ಶಾಲಾವರಣದಲ್ಲಿ ವಸ್ತು ಪ್ರದರ್ಶನ ಏರ್ಪಡಿಸಲಾಗಿತ್ತು. ಹೊಸತನಗಳಿಂದ ಕೂಡಿದ್ದ ಹಬ್ಬದಲ್ಲಿ ಪುಟಾಣಿ ಮಕ್ಕಳು ಹಾಡುಗಳಿಗೆ ಹೆಜ್ಜೆ ಹಾಕಿ ಕುಣಿದು ಸಂಭ್ರಮಿಸಿದರು. 

ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜಿನ ಇಂಗ್ಲಿಷ್ ಉಪನ್ಯಾಸಕಿ ಶೀಲಾ, ‘ಇಂಗ್ಲಿಷ್ ಅಂತರರಾಷ್ಟ್ರೀಯ ಭಾಷೆ. ನಮ್ಮ ಬದುಕಿನಲ್ಲಿ ಪ್ರತಿ ನಿತ್ಯ ಇಂಗ್ಲಿಷ್ ಬಳಕೆಯಾಗುತ್ತಿದೆ. ಇಂತಹ ಹಬ್ಬದಿಂದ ಮಕ್ಕಳು ಇಂಗ್ಲಿಷ್ ಕಲಿಕೆಯಲ್ಲಿ ಮುಂದೆ ಬರಲು ಸಹಕಾರಿಯಾಗಲಿದೆ’ ಎಂದರು.

‘ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಭಾಷೆಯ ಸಂಸ್ಕೃತಿ, ಮಹತ್ವ ತಿಳಿಸಿಕೊಡುವ ಜೊತೆಗೆ ವಿವಿಧ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು’ ಎಂದರು. 

ಶಾಲಾ ಆಡಳಿತ ಮಂಡಳಿಯ ಟ್ರಸ್ಟಿ ಡಿ.ಎನ್.ಮಹದೇವಪ್ಪ ಮಾತನಾಡಿ, ‘ಇಂಗ್ಲಿಷ್ ಹಬ್ಬವು ಮಕ್ಕಳ ಇಂಗ್ಲಿಷ್ ಕಲಿಕೆಗೆ ಪೂರಕವಾಗುತ್ತದೆ.  ಈಗಿನ ದಿನಗಳಲ್ಲಿ ಇಂಗ್ಲಿಷ್ ಬಳಕೆ ಹಚ್ಚಿನ ಮಹತ್ವ ಪಡೆದುಕೊಂಡಿದ್ದು, ಮುಂದಿನ ದಿನಗಳಲ್ಲಿ ಉದ್ಯೋಗ ಪಡೆಯಲು ಅನುಕೂಲವಾಗಲಿದೆ’ ಎಂದರು.

ಸಂಸ್ಥೆಯ ಆಡಳಿತಾಧಿಕಾರಿ ನಾಗರಾಜು ಮಾತನಾಡಿದರು. ನಗರಸಭಾ ಸದಸ್ಯರಾದ ನೀಲಮ್ಮ, ಗೌರಿ ಸೆಂದಿಲ್, ಪ್ರಾಂಶುಪಾಲ ಕೆ.ಸಿ.ಶ್ರೀಧರಮೂರ್ತಿ, ಮುಖ್ಯ ಶಿಕ್ಷಕ ಮಹದೇವಸ್ವಾಮಿ, ಚಿತ್ರಕಲಾ ಶಿಕ್ಷಕ ಸಂಪತ್‌ಕುಮಾರ್, ಶಿಕ್ಷಕಿ ಉಮೆಸನ್ಮಾಂ, ಪೋಷಕರು, ವಿದ್ಯಾರ್ಥಿಗಳು ಇದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT