ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಡಿದ ಕಾರಿನ ಚಕ್ರ: ಶಾಸಕ ಕೃಷ್ಣಮೂರ್ತಿ ಪಾರು

Published 25 ಏಪ್ರಿಲ್ 2024, 15:22 IST
Last Updated 25 ಏಪ್ರಿಲ್ 2024, 15:22 IST
ಅಕ್ಷರ ಗಾತ್ರ

ಕೊಳ್ಳೇಗಾಲ: ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಪ್ರಯಾಣಿಸುತ್ತಿದ್ದ ಕಾರು ಬುಧವಾರ ರಾತ್ರಿ ಮೈಸೂರಿನ ಹೊರವಲಯದ ನಾಡನಹಳ್ಳಿ ಬಳಿ ಅಪಘಾತವಾಗಿದ್ದು, ಅದೃಷ್ಟವಶಾತ್ ಶಾಸಕರು ಸೇರಿದಂತೆ ಕಾರಿನಲ್ಲಿ ಇದ್ದವರಿಗೆ ಯಾವುದೇ ಅಪಾಯವಾಗಿಲ್ಲ.

ಶಾಸಕ ಎ.ಆರ್. ಕೃಷ್ಣಮೂರ್ತಿ ಅವರೊಂದಿಗೆ ಆಪ್ತ ಸಹಾಯಕ ಚೇತನ್ ಮತ್ತು ಚಾಲಕ ಸತೀಶ್ ಇದ್ದರು.

ಕೊಳ್ಳೇಗಾಲದಿಂದ ಮೈಸೂರಿನ ಮನೆಗೆ ತೆರಳುತ್ತಿದ್ದಾಗ ಕಾರಿನ ಎಡಬದಿಯ ಎರಡೂ ಚಕ್ರಗಳು ಸ್ಫೋಟಗೊಂಡ ಕಾರಣಕ್ಕೆ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆಬದಿ ಹಳ್ಳಕ್ಕೆ ಬಿದ್ದಿದ್ದು, ಜಖಂಗೊಂಡಿದೆ.

‘ಚುನಾವಣಾ ಪ್ರಚಾರ ಮುಗಿಸಿ ರಾತ್ರಿ ಮೈಸೂರಿನ ಮನೆಗೆ ಹೋಗುತ್ತಿದ್ದೆ. ಆ ಸಂದರ್ಭದಲ್ಲಿ ಕಹಿ ಘಟನೆ ನಡೆದಿದೆ. ಯಾವುದೇ ತೊಂದರೆ ಆಗಿಲ್ಲ. ಆರೋಗ್ಯವಾಗಿದ್ದೇನೆ ಗುರುವಾರ ಕ್ಷೇತ್ರಕ್ಕೆ ತೆರಳಿ ಕ್ಷೇತ್ರದ ಮತದಾರರ ಮನೆ ಮನೆಗೆ ತೆರಳಿ ಮತ ಪ್ರಚಾರ ಮಾಡುವೆ’ ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT