ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂತೇಮರಹಳ್ಳಿ | ಸರ್ಕಾರಿ ಆಸ್ಪತ್ರೆಯಲ್ಲಿ ಹಣ ವಸೂಲಿ: ಇಲಾಖೆ ತನಿಖೆ

ಆಶಾ ಕಾರ್ಯಕರ್ತೆಯರಿಂದ ಸಿಬ್ಬಂದಿ ಹಣ ಪಡೆಯುತ್ತಿರುವ ವಿಡಿಯೊ
Published 23 ಮಾರ್ಚ್ 2024, 4:32 IST
Last Updated 23 ಮಾರ್ಚ್ 2024, 4:32 IST
ಅಕ್ಷರ ಗಾತ್ರ

ಚಾಮರಾಜನಗರ/ಸಂತೇಮರಹಳ್ಳಿ: ಸಂತೇಮರಹಳ್ಳಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಂದ ಹಣ ವಸೂಲಿ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರಿಗೆ ಇತ್ತೀಚೆಗೆ ದೂರು ಹೋಗಿದ್ದು, ಅದಕ್ಕೆ ಪೂರಕವಾಗಿ ಆಸ್ಪತ್ರೆಯ ಸಿಬ್ಬಂದಿಯೊಬ್ಬರು ಆಶಾ ಕಾರ್ಯಕರ್ತೆಯರಿಂದ ಹಣ ಪಡೆಯುತ್ತಿರುವ ವಿಡಿಯೊ ವಾಟ್ಸ್‌ಆ್ಯಪ್‌ನಲ್ಲಿ ಹರಿದಾಡುತ್ತಿದೆ. 

ಎರಡು ವಿಡಿಯೊ ತುಣುಕುಗಳಿದ್ದು, ಎರಡರಲ್ಲೂ ಆಶಾ ಕಾರ್ಯಕರ್ತೆಯರು ₹500ರ ನೋಟುಗಳನ್ನು ಎಣಿಸುತ್ತಾ ನರ್ಸ್‌ ಒಬ್ಬರಿಗೆ ಹಣ ನೀಡುತ್ತಿರುವ ದೃಶ್ಯಾವಳಿಗಳಿವೆ. 

ಕೆಲವು ದಿನಗಳ ಹಿಂದೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್‌ ಅವರು ಸಂಜೆ ಹೊತ್ತು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಗುರುವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಸ್‌.ಚಿದಂಬರ ಅವರು ಕೂಡ ಆಸ್ಪತ್ರೆಗೆ ಭೇಟಿ ನೀಡಿದ್ದರು. 

ದೂರಿನ ಆಧಾರದಲ್ಲಿ ಇಬ್ಬರೂ ಭೇಟಿ ನೀಡಿದ್ದಾರೆ ಎಂದು ಗೊತ್ತಾಗಿದೆ. ಡಾ.ಚಿದಂಬರ ಅವರು ವೈದ್ಯಾಧಿಕಾರಿ ಡಾ.ರೇಣುಕಾದೇವಿ ಹಾಗೂ ಸಿಬ್ಬಂದಿಯ ಹೇಳಿಕೆ ಪಡೆದಿದ್ದಾರೆ. 

ಆಸ್ಪತ್ರೆ ಸಿಬ್ಬಂದಿ ಹಣ ಪಡೆಯುತ್ತಿರುವುದು (ವಿಡಿಯೊ ಚಿತ್ರ)
ಆಸ್ಪತ್ರೆ ಸಿಬ್ಬಂದಿ ಹಣ ಪಡೆಯುತ್ತಿರುವುದು (ವಿಡಿಯೊ ಚಿತ್ರ)

ಈ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಚಿದಂಬರ, ‘ದೂರು ಬಂದ ತಕ್ಷಣವೇ ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದೇನೆ. ಸಂಬಂಧಿಸಿದವರ ಹೇಳಿಕೆ ಪಡೆದಿದ್ದೇವೆ. ಎರಡು ಮೂರು ದಿನಗಳಲ್ಲಿ ಜಿಲ್ಲಾಧಿಕಾರಿಯವರಿಗೆ ವರದಿ ನೀಡುತ್ತೇನೆ’ ಎಂದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT