ಚಾಮರಾಜನಗರ: ಗುಂಡ್ಲುಪೇಟೆ ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ಅರಣ್ಯಾಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ರೈತರ ವಿರುದ್ಧ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ರಾಜ್ಯ ರೈತ ಸಂಘ ಹಾಗೂ ರಾಜ್ಯ ಕಬ್ಬು ಬೆಳೆಗಾರ ಸಂಘದಿಂದ ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಚಾಮರಾಜೇಶ್ವರ ದೇವಸ್ಥಾನದ ಬಳಿ ಜಮಾಯಿಸಿದ ರೈತರು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು, ಭುವನೇಶ್ವರಿ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಜಿಲ್ಲಾಧಿಕಾರಿ ಕಚೇರಿಯವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಸಂಘದ ರಾಜ್ಯಾಧ್ಯಕ್ಷ ಹಳ್ಳಿಕೆರೆ ಹುಂಡಿ ಭಾಗ್ಯರಾಜ್ ಮಾತನಾಡಿ ‘ಹುಲಿ ಸೆರೆಹಿಡಿಯುವಲ್ಲಿ ನಿರ್ಲಕ್ಷ್ಯ ತೋರಿದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಕ್ಕೆ ರೈತರ ವಿರುದ್ಧವೇ ಪ್ರಕರಣ ದಾಖಲಿಸಿರುವುದು ಖಂಡನೀಯ. ಅಧಿಕಾರಿಗಳು ಪ್ರಕರಣ ವಾಪಸ್ ಪಡೆಯಬೇಕು’ ಎಂದು ಒತ್ತಾಯಿಸಿದರು.

ಕಬ್ಬು ಬೆಳೆದ ರೈತರು ಸಂಕಷ್ಟದಲ್ಲಿ ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗುತ್ತಿಲ್ಲ, ತೂಕದದಲ್ಲಿ ಮೋಸವಾಗುತ್ತಿದೆ. ಸಕ್ಕರೆ ಕಾರ್ಖಾನೆಗಳ ಮುಂದೆ ತೂಕದ ಯಂತ್ರ ಅಳವಡಿಸಿ ರೈತರಿಗೆ ಕಾರ್ಖಾನೆಗಳಿಂದ ಆಗುತ್ತಿರುವ ಮೋಸ ತಪ್ಪಿಸಬೇಕು, ಪ್ರಸಕ್ತ ಸಾಲಿಗೆ ಟನ್ ಕಬ್ಬಿಗೆ ₹ 3,295 ನಿಗದಿಗೊಳಿಸಿರುವುದು ಅವೈಜ್ಞಾನಿಕವಾಗಿದ್ದು ಕಬ್ಬಿನ ಕಟಾವು ಹಾಗೂ ಸಾಗಾಣಿಕೆ ವೆಚ್ಚ ಕಳೆದರೆ ರೈತರಿಗೆ ಲಾಭ ಸಿಗುವುದಿಲ್ಲ ಎಂದರು.

ಬೆಳೆಗಾರರು ಹಾಗೂ ಕಾರ್ಖಾನೆ ಮಾಲೀಕರ ನಡುವೆ ದ್ವಿಪಕ್ಷೀಯ ಒಪ್ಪಂದ ಜಾರಿ ಮೂಲಕ ಕಬ್ಬಿನ ಕಟಾವು ಹಾಗೂ ಸಾಗಾಣೆ ವೆಚ್ಚವನ್ನು ಕಾರ್ಖಾನೆ ಮಾಲೀಕರು ಭರಿಸುವಂತೆ ಕ್ರಮ ಕೈಗೊಳ್ಳಬೇಕು, ಹೋಬಳಿ ಮಟ್ಟದಲ್ಲಿ ಭತ್ತ ಖರೀದಿ ಕೇಂದ್ರಗಳನ್ನು ತೆರೆಯಲು ರಾಜ್ಯ ಸರ್ಕಾರ ತಕ್ಷಣ ಜಿಲ್ಲಾಡಳಿತಕ್ಕೆ ಸೂಚನೆ ನೀಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾಧ್ಯಕ್ಷ ಹಾಲಿನ ನಾಗರಾಜ್, ಮುಖಂಡರಾದ ಮಲಿಯೂರು ಮಹೇಂದ್ರ, ಅಂಗಡಿ ಸತೀಶ್, ಪ್ರಕಾಶ ಗಾಂಧಿ, ಸ್ಯಾಂಡ್ರಳ್ಳಿ ಮಲ್ಲು, ಬಸವರಾಜು, ದೇವನೂರು ನಾಗೇಂದ್ರ, ಗುರುವಿನಪುರ ಚಂದ್ರಪ್ಪ, ಹೊನ್ನೇಗೌಡನಹಳ್ಳಿ ಮಹೇಶ್, ಅರಳಿಕಟ್ಟೆ ಪ್ರಭುಸ್ವಾಮಿ, ನರಸಮಂಗಲ ನಾಗಮಲ್ಲಪ್ಪ ಗೌಡ, ಮಹದೇವಪ್ಪ, ಕಿಳಿಪುರ ಶ್ರೀಕಂಠ, ಮುಕುಡಳ್ಳಿ ಪುಟ್ಟಮಲ್ಲೆಗೌಡ ಇದ್ದರು.

‘ಅಕ್ರಮ– ಸಕ್ರಮ ಮರುಜಾರಿಗೊಳಿಸಿ’

ಅಕ್ರಮ ಸಕ್ರಮ ಯೋಜನೆ ಮರು ಜಾರಿ ಮಾಡಬೇಕು ಜಿಲ್ಲೆಯ ಕೆರೆಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ವಿಸ್ತರಿಸಿ ಮಲಿಯೂರಿನ ರಾಮನಕೆರೆ ಗುಂಡ್ಲುಪೇಟೆಯ ಊರದಹಳ್ಳಿ ಕೆರೆ ತುಂಬಿಸಬೇಕು. ಗ್ರಾಮೀಣ ಭಾಗದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದ್ದು ಬೆಳೆ ನಷ್ಟ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ರಾಜ್ಯದಲ್ಲಿ 8 ಲಕ್ಷ ಬಿಪಿಎಲ್ ಪಡಿತರ ಕಾರ್ಡ್ಗಳನ್ನು ರದ್ದುಗೊಳಿಸಲು ಮುಂದಾಗಿರುವ ಸರ್ಕಾರದ ನಡೆ ಸರಿಯಲ್ಲ ಅರ್ಹರಿಗೆ ತೊಂದರೆಯಾಗದಂತೆ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು ಎಂದು ಹಳ್ಳಿಕೆರೆ ಹುಂಡಿ ಭಾಗ್ಯರಾಜ್ ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.