ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾರ್ವಜನಿಕವಾಗಿ ಪೆಟ್ರೋಲ್‌ ಸುರಿದುಕೊಂಡು ರೈತ ಆತ್ಮಹತ್ಯೆ ಯತ್ನ

Last Updated 20 ಅಕ್ಟೋಬರ್ 2021, 15:42 IST
ಅಕ್ಷರ ಗಾತ್ರ

ಚಾಮರಾಜನಗರ: ತಾಲ್ಲೂಕಿನ ರೈತರೊಬ್ಬರು ನಗರದ ಭುವನೇಶ್ವರಿ ವೃತ್ತದಲ್ಲಿ ಬುಧವಾರ ಮಧ್ಯಾಹ್ನ ಪೆಟ್ರೋಲ್‌ ಮೈಮೇಲೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಹೆಗ್ಗೋಠಾರದ ಶಿವಣ್ಣ ಅವರು ಆತ್ಮಹತ್ಯೆಗೆ ಯತ್ನಿಸಿದವರು. ಸ್ಥಳದಲ್ಲಿದ್ದ ಪೊಲೀಸರು ತಕ್ಷಣವೇ ಅವರನ್ನು ತಡೆದು ಅನಾಹುತವನ್ನು ತಪ್ಪಿಸಿದ್ದಾರೆ.

‘ಊರಿನಲ್ಲಿ ಪಕ್ಕದ ಜಮೀನಿನ ಮಾಲೀಕರು ನನಗೆ ನಿರಂತರ ಕಿರುಕುಳ ಕೊಡುತ್ತಿದ್ದು, ಪ್ರಭಾವ ಬಳಿಸಿ ಪೊಲೀಸರು ಕ್ರಮ ಕೈಗೊಳ್ಳದಂತೆ ಮಾಡಿದ್ದಾರೆ. ನನಗೆ ನ್ಯಾಯ ಸಿಗುತ್ತಿಲ್ಲ’ ಎಂದು ಶಿವಣ್ಣ ಅವರು ಆರೋಪಿಸಿದ್ದಾರೆ.

ಸಂಚಾರ ಪೊಲೀಸ್‌ ಸಿಬ್ಬಂದಿಯೊಬ್ಬರು ನೀಡಿರುವ ದೂರಿನ ಅನ್ವಯ ಪಟ್ಟಣ ಪೊಲೀಸರು ಶಿವಣ್ಣ ಅವರನ್ನು ಬಂಧಿಸಿದ್ದಾರೆ.

‘ಶಿವಣ್ಣ ಹಾಗೂ ಅವರ ನೆರೆ ವ್ಯಕ್ತಿಗೆ ಜಮೀನು ವಿಚಾರದಲ್ಲಿ ವಿವಾದಇದೆ. ಪ್ರಕರಣ ನ್ಯಾಯಾಲಯದಲ್ಲಿ ನಡೆಯುತ್ತಿದೆ. ತಮಗೆ ನ್ಯಾಯ ಕೊಡಿಸಬೇಕು ಎಂದು ಶಿವಣ್ಣ ಅವರು ಗ್ರಾಮಾಂತರ ಠಾಣೆಗೆ ಹೋಗಿ ಮನವಿ ಮಾಡಿದ್ದಾರೆ. ಪ್ರಕರಣ ನ್ಯಾಯಾಲಯದಲ್ಲಿ ಇರುವುದರಿಂದ ತಾವೇನು ಮಾಡಲು ಸಾಧ್ಯವಿಲ್ಲ, ನ್ಯಾಯಾಲಯದಲ್ಲೇ ಇತ್ಯರ್ಥವಾಗಬೇಕು ಎಂದು ಸಿಬ್ಬಂದಿ ಹೇಳಿ ಕಳಿಸಿದ್ದಾರೆ. ಇದರಿಂದ ಬೇಸರಗೊಂಡ ಅವರು ತಮಗೆಲ್ಲೂ ನ್ಯಾಯ ಸಿಗುತ್ತಿಲ್ಲ ಎಂದು ಭುವನೇಶ್ವರಿ ವೃತ್ತದಲ್ಲಿ ಪೆಟ್ರೋಲ್‌ ಸುರಿದುಕೊಂಡು ಬೆಂಕಿ ಹಚ್ಚಲು ಯತ್ನಿಸಿದ್ದರು. ಸ್ಥಳದಲ್ಲಿದ್ದ ನಮ್ಮ ಸಿಬ್ಬಂದಿ ಅವರನ್ನು ರಕ್ಷಿಸಿದ್ದಾರೆ’ ಎಂದು ಪಟ್ಟಣ ಠಾಣೆ ಇನ್‌ಸ್ಪೆಕ್ಟರ್‌ ಮಹೇಶ್‌ ಅವರು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT