ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತ ಸಂಘದ ಪ್ರತಿಭಟನೆ

Last Updated 26 ಏಪ್ರಿಲ್ 2022, 14:14 IST
ಅಕ್ಷರ ಗಾತ್ರ

ಚಾಮರಾಜನಗರ:ಭತ್ತ, ರಾಗಿ, ಜೋಳ ಹಾಗೂ ಮುಸುಕಿನ ಜೋಳ ಸೇರಿದಂತೆ ರೈತರು ಬೆಳೆದಿರುವ ದವಸ ಧಾನ್ಯಗಳನ್ನು ಕನಿಷ್ಠ ಬೆಂಬಲಯಡಿ ಪೂರ್ಣ ಉತ್ಪನ್ನಗಳನ್ನು ಬೆಂಬಲ ಬೆಲೆಯಡಿ ಖರೀದಿಸಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದ ಕಾರ್ಯಕರ್ತರು ಮಂಗಳವಾರ ನಗರದಲ್ಲಿ ನಡೆಸಿದರು.

ನಗರದ ತರಕಾರಿ ಮಾರುಕಟ್ಟೆ ಬಳಿಯ ಜನನ ಮಂಟಪದ ಬಳಿಯಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ರೈತರು, ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿ ರಸ್ತೆ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿ ಅಲ್ಲಿ ಪ್ರತಿಭಟನೆ ನಡೆಸಿದರು. ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

‘ಭಾಗ್ಯಜ್ಯೋತಿ, ಕುಟೀರಜ್ಯೋತಿ ವಿದ್ಯುತ್ ಸಂಪರ್ಕಗಳನ್ನು ಕಡಿತ ಮಾಡುತ್ತಿರುವುದನ್ನು ತಕ್ಷಣ ನಿಲ್ಲಿಸಬೇಕು. ಕರ ನಿರಾಕರಣೆ ಚಳವಳಿಗಾರರ ಮನೆ ವಿದ್ಯುತ್‌ ಬಿಲ್ಲಿನ ಬಾಕಿಯನ್ನು ಸಂಪೂರ್ಣ ಮನ್ನಾ ಮಾಡಿ ಮುಂದಿನ ಬಿಲ್ ಅನ್ನು ಪಾವತಿಸಲು ಅವಕಾಶ ನೀಡಬೇಕು. ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಪೂರೈಸಬೇಕು’ ಎಂದು ಆಗ್ರಹಿಸಿದರು.

‘ಟ್ರ್ಯಾಕ್ಟರ್ ಹಾಗೂ ಇತರೆ ಕೃಷಿ ಉಪಕರಣಗಳ ಗರಿಷ್ಟ ಮಾರುಕಟ್ಟೆ ಧಾರಣೆಯನ್ನು (ಎಂಆರ್‌ಪಿ) ಕಂಪನಿಗಳ ಅಧಿಕೃತ ವೆಬ್‌ಸೈಟ್‌ಗಳಲ್ಲಿ ಪ್ರಕಟಿಸಬೇಕು. ಗ್ರಾಮೀಣ ರಸ್ತೆಗಳ ಅಭಿವೃದ್ಧಿಯಾಗಬೇಕು. ರೈತರ ಜಮೀನು ಖಾತೆಗಳ ಪೋಡಿ ಹಾಗೂ ಹದ್ದುಬಸ್ತು ಮಾಡಲು ವಿಧಿಸುವ ಸರ್ಕಾರಿ ಶುಲ್ಕವನ್ನು ಹೆಚ್ಚಳ ಮಾಡಿರುವುದನ್ನು ವಾಪಸ್‌ ಪಡೆಯಬೇಕು. ಅಂಗಡಿಗಳಲ್ಲಿ ಪಡಿತರ ಚೀಟಿದಾರರಿಗೆ ಅಡುಗೆ ಎಣ್ಣೆಯನ್ನು ಕಡಿಮೆ ಬೆಲೆಯಲ್ಲಿ ವಿತರಣೆ ಮಾಡಲು ಕ್ರಮವಹಿಸಬೇಕು’ ಎಂದು ಒತ್ತಾಯಿಸಿದರು.

‘ರೈತ ಚಳವಳಿಗಾರರ ಮೇಲೆ ಸುಳ್ಳು ಮೊಕದ್ದಮೆ ಹಾಕುವುದನ್ನು ನಿಲ್ಲಿಸಬೇಕು. ಈಗಿರುವ ಮೊಕದ್ದಮೆಗಳನ್ನು ವಾಪಸ್ ಪಡೆಯಬೇಕು. ನರೇಗಾ ಯೋಜನೆಯನ್ನು ಕೃಷಿ ಕ್ಷೇತ್ರಕ್ಕೂ ಅನ್ವಯವಾಗುವಂತೆ ವಿಸ್ತರಿಸಿ ರೈತ ಕುಟುಂಬದ ಸದಸ್ಯರಿಗೂ ಗೌರವಧನ ನೀಡಬೇಕು. ಬಿತ್ತನೆ ಬೀಜವನ್ನು ಸಮರ್ಪಕವಾಗಿ ಪೂರೈಸಬೇಕು. ರಸಗೊಬ್ಬರ ಬೆಲೆ ಇಳಿಸಬೇಕು. ದರಖಾಸ್ತು ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ಕಲ್ಪಿಸಲು ಮಂಜೂರು ಭೂಮಿಯನ್ನು ದುರಸ್ತಿಪಡಿಸಬೇಕು’ ಎಂದು ಆಗ್ರಹಿಸಿದರು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಹೆಬ್ಬಸೂರು ಬಸವಣ್ಣ, ಪ್ರಧಾನ ಕಾರ್ಯದರ್ಶಿ ಜ್ಯೋತಿಗೌಡನಪುರ ಸಿದ್ದರಾಜು, ಕೊಳ್ಳೇಗಾಲ ತಾಲ್ಲೂಕು ಘಟಕದ ಅಧ್ಯಕ್ಷ ಗೌಡೇಗೌಡ, ಮಹದೇವಪ್ರಸಾದ್, ಮಹದೇವಸ್ವಾಮಿ, ಮಹೇಶ್ ನಾಯಕ,, ಗಜೇಂದ್ರ, ರಾಜಪ್ಪ, ರಾಜಶೇಖರಪ್ಪ, ಕುಮಾರಸ್ವಾಮಿ, ಶಿವನಂಜಪ್ಪ ಸೇರಿದಂತೆ ಹಲವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT