ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ- ಸಭೆಗೆ ತಡವಾಗಿ ಬಂದ ಸಚಿವ ಸೋಮಣ್ಣ: ರೈತ ಮುಖಂಡರ ಆಕ್ರೋಶ

Last Updated 22 ಅಕ್ಟೋಬರ್ 2022, 8:30 IST
ಅಕ್ಷರ ಗಾತ್ರ

ಚಾಮರಾಜನಗರ: ರೈತರ ಕುಂದುಕೊರತೆಗಳ ಸಭೆಗೆ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಒಂದೂವರೆಗಂಟೆ ವಿಳಂಬವಾಗಿ ಬಂದಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿ ರೈತ ಮುಖಂಡರು ಸಭೆ ಬಹಿಷ್ಕರಿಸಿದರು.

ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿರುವ ಜಿಲ್ಲಾಡಳಿತ ಭವನದ ಗೇಟ್ ಮುಂಭಾಗ ದಿಡೀರ್ ಧರಣಿ ಕುಳಿತ ಪ್ರತಿಭಟನಕಾರರು ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

'ಸೋಮಣ್ಣ ಅವರನ್ನು ಉಸ್ತುವಾರಿ ಸಚಿವ ಸ್ಥಾನದಿಂದ ವಜಾ ಮಾಡಬೇಕು. ಸ್ಥಳೀಯರನ್ನು ಉಸ್ತುವಾರಿ ಸಚಿವರನ್ನು ನೇಮಕ ಮಾಡಬೇಕು. ಇನ್ನು ಮುಂದೆ ಅವರ ನೇತೃತ್ವದಲ್ಲಿ ನಡೆಯುವ ಯಾವುದೇ ಸಭೆಯಲ್ಲಿ ಭಾಗವಹಿಸುವುದಿಲ್ಲ. ಅವರು ಜಿಲ್ಲೆಗೆ ಬಂದಾಗಲೆಲ್ಲ ಕಪ್ಪು ಬಾವುಟ ಪ್ರದರ್ಶನ ಮಾಡುತ್ತೇವೆ' ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸ್ಥಳಕ್ಕೆ ಬಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ.ಶಿವಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಕಾತ್ಯಾಯಿನಿದೇವಿ ಅವರು ರೈತ ಮುಖಂಡರನ್ನು ಮನವೊಲಿಸಲು ಪ್ರಯತ್ನ ನಡೆಸಿದರು. ಆದರೆ, ಮುಖಂಡರು ಪಟ್ಟು ಸಡಿಸಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT