ಭಾನುವಾರ, ಡಿಸೆಂಬರ್ 6, 2020
22 °C
ಖಚಿತ ಮಾಹಿತಿಯ ಮೇರೆಗೆ ಕೊಳ್ಳೇಗಾಲ ಠಾಣೆಯ ಇನ್‌ಸ್ಪೆಕ್ಟರ್‌ ರಾಜೇಂದ್ರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಮಾಲು ಸಮೇತ ಬಂಧಿಸಿದ್ದಾರೆ.

ಅಕ್ರಮ ಗಾಂಜಾ ಮಾರಾಟ: ತಂದೆ, ಮಗ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊಳ್ಳೇಗಾಲ: ಅರ್ಧ ಕೆಜಿಯಷ್ಟು ಒಣ ಗಾಂಜಾ ಸಾಗಣೆ ಮಾಡುತ್ತಿದ್ದ ತಂದೆ ಹಾಗೂ ಮಗನನ್ನು ನಗರ ಪೊಲೀಸರು ತಾಲ್ಲೂಕಿನ ಸಿದ್ದಯ್ಯನಪುರ ಗ್ರಾಮದ ಮುಖ್ಯ ರಸ್ತೆಯಲ್ಲಿ ಬಂಧಿಸಿದ್ದಾರೆ. 

ತಾಲ್ಲೂಕಿನ ಇಕ್ಕಡಹಳ್ಳಿ ಗ್ರಾಮದ ನೀಲಸಿದ್ದಶೆಟ್ಟಿ ಹಾಗೂ ಅವರ ಸೋಮಣ್ಣ ಬಂಧಿತರು. ಆರೋಪಿಗಳು 480 ಗ್ರಾಂ ಒಣ ಗಾಂಜಾವನ್ನು ಸಾಗಣೆ ಮಾಡುತ್ತಿದ್ದರು.

ಖಚಿತ ಮಾಹಿತಿ ಮೇರೆಗೆ, ಕೊಳ್ಳೇಗಾಲ ಠಾಣೆಯ ಇನ್‌ಸ್ಪೆಕ್ಟರ್‌ ರಾಜೇಂದ್ರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಮಾಲು ಸಮೇತ ಬಂಧಿಸಿದೆ. ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು