ಭಾನುವಾರ, ಫೆಬ್ರವರಿ 23, 2020
19 °C
ನಿರಕ್ಷೇಪಣಾ ಪ್ರಮಾಣ ಪತ್ರ ನೀಡಲು ₹3,000 ಲಂಚಕ್ಕೆ ಬೇಡಿಕೆ

ಅರಣ್ಯ ಇಲಾಖೆ ಎಫ್‌ಡಿಎ ಎಸಿಬಿ ಬಲೆಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಭೂಪರಿವರ್ತನೆಗಾಗಿ ನಿರಕ್ಷೇಪಣಾ ಪ್ರಮಾಣಪತ್ರ (ಎನ್‌ಒಸಿ) ನೀಡಲು ₹3,000 ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅರಣ್ಯ ಇಲಾಖೆಯ ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) ಬುಧವಾರ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. 

ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪುಟ್ಟಸ್ವಾಮಿ ಅವರು ಎಸಿಬಿ ಬಲೆಗೆ ಬಿದ್ದವರು. 

ಹರದನಹಳ್ಳಿಯ ಆರ್‌.ಲಿಂಗರಾಜು ಅವರು ಭೂಪರಿವರ್ತನೆಗಾಗಿ ನಿರಕ್ಷೇಪಣಾ ಪ್ರಮಾಣಪತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಪುಟ್ಟಸ್ವಾಮಿ ಅವರು ಎನ್‌ಒಸಿ ನೀಡಲು ₹3,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮಂಗಳವಾರ ₹500 ಪಡೆದಿದ್ದರು. ಉಳಿದ ₹2,500 ಅನ್ನು ಬುಧವಾರ ನೀಡುವಂತೆ ಹೇಳಿದ್ದರು. ಲಿಂಗರಾಜು ಅವರು ನಗರದ ಎಸಿಬಿ ಪೊಲೀಸರಿಗೆ ದೂರು ನೀಡಿದ್ದರು. 

ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಬಲೆಗೆ: ದೂರುದಾರ ಬುಧವಾರ ಸಂಜೆ ಬಿಆರ್‌ಟಿ ಕಚೇರಿಗೆ ದುಡ್ಡು ತೆಗೆದುಕೊಂಡು ಹೋಗಿದ್ದರು. ಎಸಿಬಿ ಅಧಿಕಾರಿಗಳು ಕೂಡ ಅಲ್ಲೇ ಕಾದಿದ್ದರು.

‘ಪುಟ್ಟಸ್ವಾಮಿ ಅವರು ಅಲ್ಲಿ ದುಡ್ಡು ಪಡೆಯದೆ, ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣಕ್ಕೆ ಬರುವಂತೆ, ಅಲ್ಲೇ ಹಣಕೊಡುವಂತೆ ದೂರುದಾರರಿಗೆ ಸೂಚಿಸಿದರು. ₹2,500 ಪಡೆಯುತ್ತಿದ್ದ ಸಂದರ್ಭದಲ್ಲಿ ನಮ್ಮ ಕೈಗೆ ಸಿಕ್ಕಿಬಿದ್ದರು’ ಎಂದು ಎಸಿಬಿ ಡಿವೈಎಸ್‌ಪಿ ಸದಾನಂದ ಎ.ಟಿ. ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

ಪುಟ್ಟಸ್ವಾಮಿ ಅವರನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಅವರು ತಿಳಿಸಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು