ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಾವೇರಿ ವನ್ಯದಾಮದಲ್ಲಿ ಹೆಣ್ಣಾನೆ ಸಾವು; ತಾಯಿಬಿಟ್ಟು ಕದಲದ ಮರಿಯಾನೆ

ಕಾವೇರಿ ವನ್ಯದಾಮದ ಕೊತ್ತನೂರು ವನ್ಯಜೀವಿ ವಲಯದಲ್ಲಿ ಹೆಣ್ಣಾನೆಯೊಂದು ಮೃತಪಟ್ಟಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
Published 3 ಜುಲೈ 2024, 16:18 IST
Last Updated 3 ಜುಲೈ 2024, 16:18 IST
ಅಕ್ಷರ ಗಾತ್ರ

ಹನೂರು (ಚಾಮರಾಜನಗರ ಜಿಲ್ಲೆ): ಕಾವೇರಿ ವನ್ಯದಾಮದ ಕೊತ್ತನೂರು ವನ್ಯಜೀವಿ ವಲಯದಲ್ಲಿ ಹೆಣ್ಣಾನೆಯೊಂದು ಮೃತಪಟ್ಟಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಬುಧವಾರ ಗಸ್ತಿನಲ್ಲಿದ್ದ ಅರಣ್ಯ ಇಲಾಖೆ ಸಿಬ್ಬಂದಿಗೆ ಕೊತ್ತನೂರು ವನ್ಯಜೀವಿ ವಲಯದ ಮತ್ತೀಪುರ ಬೀಟ್‌ ವ್ಯಾಪ್ತಿಯ ‘ಡಿ’ ಲೇನ್‌ನಲ್ಲಿ 30 ವರ್ಷ ಪ್ರಾಯದ ಆನೆ ಮೃತಪಟ್ಟಿರುವುದು ಕಂಡುಬಂದಿದೆ.

ತಾಯಿ ಆನೆ ಮೃತಪಟ್ಟಿರುವುದನ್ನು ಕಂಡು ಮರಿಯಾನೆ ಕೂಡ ಸ್ಥಳದಿಂದ ಕದಲದೆ ಅಲ್ಲಿಯೇ ನಿಂತಿದ್ದು ಕಳೆಬರ ವಿಲೇವಾರಿ ಸಾಧ್ಯವಾಗುತ್ತಿಲ್ಲ. ಗುರುವಾರ ಮೃತ ಆನೆಯ ಮರಣೋತ್ತರ ಪರೀಕ್ಷೆ ನಡೆಸಲಾಗುವುದು. ವರದಿ ಬಂದ ಬಳಿಕ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ ಎಂದು ಕಾವೇರಿ ವನ್ಯಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸುರೇಂದ್ರ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT