ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: 58 ಮಂದಿ ಗುಣಮುಖ, 38 ಹೊಸ ಪ್ರಕರಣ

Last Updated 27 ಸೆಪ್ಟೆಂಬರ್ 2020, 3:04 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಶನಿವಾರ 58 ಮಂದಿ ಕೋವಿಡ್‌–19ನಿಂದ ಮುಕ್ತರಾಗಿದ್ದಾರೆ. 38 ಮಂದಿಗೆ ಸೋಂಕು ತಗುಲಿರುವುದು ಖಚಿತವಾಗಿದೆ. ಸಾವಿನ ಪ್ರಕರಣ ವರದಿಯಾಗಿಲ್ಲ.

ಈವರೆಗೆ 3,781 ಪ್ರಕರಣಗಳು ಜಿಲ್ಲೆಯಲ್ಲಿ ವರದಿಯಾಗಿವೆ. 3,062 ಮಂದಿ ಗುಣಮುಖರಾಗಿದ್ದಾರೆ. 634 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 317 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. 45 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್‌ನಿಂದಾಗಿ ಈವರೆಗೆ 60 ಮಂದಿ ಹಾಗೂ ಕೋವಿಡ್‌ ಯೇತರ ಕಾರಣದಿಂದಾಗಿ 26 ಜನರು ಮೃತಪಟ್ಟಿದ್ದಾರೆ.

ಶನಿವಾರ 689 ಮಂದಿಯ ಗಂಟಲು ದ್ರವ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, 654 ವರದಿಗಳು ನೆಗೆಟಿವ್‌ ಬಂದಿವೆ. 35 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ. ಇನ್ನು ಮೂರು ಪ್ರಕರಣಗಳು ಮೈಸೂರಿನಲ್ಲಿ ದೃಢಪಟ್ಟಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT