55 ಮಂದಿಗೆ ಸೋಂಕು, 71 ಜನರು ಗುಣಮುಖ

ಚಾಮರಾಜನಗರ: ಜಿಲ್ಲೆಯಲ್ಲಿ ಶನಿವಾರ 55 ಮಂದಿಗೆ ಕೋವಿಡ್ ಇರುವುದು ದೃಢಪಟ್ಟಿದೆ. 71 ಮಂದಿ ಚೇತರಿಸಿಕೊಂಡಿದ್ದಾರೆ. ಒಬ್ಬರು ಮೃತಪಟ್ಟಿದ್ದಾರೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 538ಕ್ಕೆ ಇಳಿದಿದೆ. ಸೋಂಕಿತರಲ್ಲಿ 28 ಮಂದಿ ಐಸಿಯುನಲ್ಲಿ, 29 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. ಉಳಿದವರು ಆಸ್ಪತ್ರೆ ಹಾಗೂ ಕೋವಿಡ್ ಕೇರ್ ಕೇಂದ್ರಗಳಲ್ಲಿ ಇದ್ದಾರೆ.
ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 30,999ಕ್ಕೆ ಏರಿದೆ. 29,958 ಮಂದಿ ಗುಣಮುಖರಾಗಿದ್ದಾರೆ.
ಶನಿವಾರ 1,526 ಮಂದಿಯ ಕೋವಿಡ್ ಪರೀಕ್ಷಾ ವರದಿ ಬಂದಿವೆ. ಈ ಪೈಕಿ 1,467 ವರದಿಗಳು ನೆಗೆಟಿವ್ ಬಂದು, 59 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ. ಜಿಲ್ಲಾಡಳಿತ ತನ್ನ ವರದಿಯಲ್ಲಿ 55 ಪ್ರಕರಣಗಳನ್ನು ಉಲ್ಲೇಖಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.