ಚಾಮರಾಜನಗರ: 57ಕ್ಕೆ ಇಳಿದ ಸಕ್ರಿಯ ಪ್ರಕರಣಗಳು

ಚಾಮರಾಜನಗರ: ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ಶನಿವಾರ 57ಕ್ಕೆ ಇಳಿದಿದೆ. ಆರು ಹೊಸ ಪ್ರಕರಣಗಳು ದಾಖಲಾಗಿದ್ದರೆ, 11 ಮಂದಿ ಗುಣಮುಖರಾಗಿದ್ದಾರೆ. ಸಾವು ಸಂಭವಿಸಿಲ್ಲ.
ಸೋಂಕಿತರ ಪೈಕಿ 39 ಮಂದಿ ಹೋಂ ಐಸೊಲೇಷನ್ನಲ್ಲಿದ್ದಾರೆ. ಸತತ ಎರಡನೇ ದಿನವೂ ಐಸಿಯುನಲ್ಲಿ ಯಾರೂ ಇಲ್ಲ.
ಜಿಲ್ಲೆಯಲ್ಲಿ ಇದುವರೆಗೆ 6,826 ಕೋವಿಡ್ ಪ್ರಕರಣಗಳು ವರದಿಯಾಗಿವೆ. 6,638 ಮಂದಿ ಗುಣಮುಖರಾಗಿದ್ದಾರೆ. 111 ಮಂದಿ ಕೋವಿಡ್ನಿಂದ ಹಾಗೂ 20 ಮಂದಿ ಬೇರೆ ಕಾರಣಗಳಿಂದ ಮೃತಪಟ್ಟಿದ್ದಾರೆ.
ಶನಿವಾರ 1,145 ಮಂದಿಯ ಗಂಟಲು ದ್ರವ ಮಾದರಿಗಳ ಪರೀಕ್ಷಾ ವರದಿ ಬಂದಿದ್ದು, 1,139 ಮಂದಿಯ ವರದಿ ನೆಗೆಟಿವ್ ಬಂದಿವೆ.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.