‘ಮುಖ್ಯಮಂತ್ರಿ ವಿರುದ್ಧ ಪ್ರಕರಣ ದಾಖಲಿಸಿದ್ದರೂ ಲೋಕಾಯುಕ್ತ ಎಸ್‌ಪಿ ಉದೇಶ್ ನ್ಯಾಯಾಲಯದ ಆದೇಶಕ್ಕೆ ಪೂರಕವಾಗಿ ನಡೆದುಕೊಂಡಿಲ್ಲ. ಮೇಲಾಧಿಕಾರಿಗಳ ಒತ್ತಡ ಹಾಗೂ ಆದೇಶದ ಬಳಿಕವಷ್ಟೆ ಎಫ್‌ಐಆರ್ ಮಾಡಿದ್ದು ಕಾನೂನು ಬಾಹಿರವಾಗಿ ನಡೆದುಕೊಂಡಿದ್ದಾರೆ. ಪ್ರಕರಣವನ್ನು ಸಿಬಿಐಗೆ ವಹಿಸುವವರೆಗೂ ಹೋರಾಟ ಮಾಡಲಾಗುವುದು. ಈ ಸಂಬಂಧ ಸೋಮವಾರ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗುವುದು’ ಎಂದು ಸ್ನೇಹಮಹಿ ಕೃಷ್ಣ ತಿಳಿಸಿದರು.
‘ಅನ್ಯರ ವಿರುದ್ಧ ಭ್ರಷ್ಟಾಚಾರ ಆರೋಪಗಳು ಕೇಳಿ ಬಂದಾಗ ರಾಜೀನಾಮೆಗೆ ಪಟ್ಟುಹಿಡಿಯುತ್ತಿದ್ದ ಸಿದ್ದರಾಮಯ್ಯ ತಮ್ಮ ವಿರುದ್ಧವೇ ದೂರು ದಾಖಲಾದಾಗ ರಾಜೀನಾಮೆ ನೀಡುವುದಿಲ್ಲ ಎಂದು ಪಟ್ಟುಹಿಡಿಯುವುದು ವಿಪರ್ಯಾಸ. ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಲಿ’ ಎಂದು ಒತ್ತಾಯಿಸಿದರು.